ಬೆಂಗಳೂರು, ಫೆ.27,ನ್ಯಾಯಮೂರ್ತಿ ಎಸ್. ಮುರಳೀಧರ್ ಅವರು ದೆಹಲಿಯ ಗಲಭೆಗಳಿಗೆ ಕಾರಣರಾದ ಬಿಜೆಪಿ ನಾಯಕರ ಮೇಲೆ ಎಫ್ಐಆರ್ ದಾಖಲಾಗದೆ ಇರುವುದನ್ನು ಕಠಿಣವಾಗಿ ಪ್ರಶ್ನಿಸಿದ್ದರು. ನ್ಯಾಯಮೂರ್ತಿ ಎಸ್. ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟಿನಿಂದ ಪಂಜಾಬ್ ಹೈಕೋರ್ಟ್ ಗೆ ರಾತ್ರೋ ರಾತ್ರಿ ವರ್ಗಾವಣೆ ಮಾಡಲಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.ನ್ಯಾಯಮೂರ್ತಿ ಎಸ್. ಮುರಳೀಧರ್ ದೆಹಲಿ ಹಿಂಸಾಚಾರದ ಪ್ರಕರಣದ ವಿಚಾರಣೆ ನಡೆಸಿ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದರು. ದೆಹಲಿಯಲ್ಲಿ 1984ರಂತಹ ಮತ್ತೊಂದು ಪರಿಸ್ಥಿತಿಯನ್ನು ನಗರದಲ್ಲಿ ತನ್ನ ಕಾವಲಿನಲ್ಲಿ ನಡೆಯಲು ಅನುಮತಿಸುವುದಿಲ್ಲ. ನಾವು ಜಾಗರೂಕರಾಗಿರಬೇಕು, ಸಾಕಷ್ಟು ಸಂಖ್ಯೆಯಲ್ಲಿ ಸಹಾಯವಾಣಿ ಸ್ಥಾಪಿಸಬೇಕು, ಸ್ಥಳಾಂತರಗೊಂಡವರಿಗೆ ಆಶ್ರಯ ನೀಡಬೇಕು, ದ್ವೇಷಭಾಷಣ ಮಾಡಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್, ಸಂಸದ ಪರ್ವೇಶ್ ವರ್ಮಾ ಮತ್ತು ಮಾಜಿ ಶಾಸಕ ಕಪಿಲ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಿಸುವ ವಿಚಾರದಲ್ಲಿ ಗುರುವಾರ ನಿರ್ಧಾರ ಕೈಗೊಳ್ಳು ವಂತೆ ನ್ಯಾಯಮೂರ್ತಿಗಳಾದ ಎಸ್.ಮುರಳೀಧರ್ ಹಾಗೂ ಎ.ಜೆ.ಭಂಭಾನಿ ಅವರ ಪೀಠವು ಆದೇಶ ನೀಡಿತ್ತು.ಇದಾದ ಬೆನ್ನಲ್ಲೇ ರಾತ್ರೋರಾತ್ರಿ ರಾಷ್ಟ್ರಪತಿಯವರು ನ್ಯಾಯಮೂರ್ತಿ ಮುರಳೀಧರ್ ಅವರನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ನ ನ್ಯಾಯಾಧೀಶರಾಗಿ ವರ್ಗಾವಣೆ ಮಾಡಲಾಗಿದೆ.ಮುರಳೀಧರ್ ಅವರ ವರ್ಗಾವಣೆಗೆ ಕಾಂಗ್ರೆಸ್ ಟೀಕಿಸಿದ್ದು, ಸಂವಿಧಾನ ರಕ್ಷಿಸಿ, ಭಾರತ ಉಳಿಸಿ, ಜಸ್ಟೀಸ್ ಮುರಳೀಧರ್ ಹ್ಯಾಸ್ಟ್ಯಾಗ್ ಆರಂಭಿಸಿ, ಮುರಳೀಧರ್ ಪರವಾಗಿ ಧ್ವನಿ ಎತ್ತಿದೆ.