ಅಲ್ಪಸಂಖ್ಯಾತರ ಸೌಲಭ್ಯಗಳನ್ನು ಸಮರ್ಕವಾಗಿ ತಲುಪಿಸಿ : ನಿಸಾರ್ ಅಹಮದ್
Deliver minority benefits effectively: Nisar Ahmed
ಕಾರವಾರ 16:- ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿರುವ ಕಾರ್ಯಕ್ರಮಗಳ ಸಂಪೂರ್ಣ ಪ್ರಯೋಜನವನ್ನು ಅಲ್ಪಸಂಖ್ಯಾತ ಸಮುದಾಯದ ಜನತೆಗೆ ಸಮರ್ಕವಾಗಿ ತಲುಪಿಸುವಂತೆ ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಅಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಹೇಳಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ, ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿನ ಅಲ್ಪ ಸಂಖ್ಯಾತ ಸಮುದಾಯಗಳಾದ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯ ಶಿಕ್ಷಣ ಪಡೆಯುವ ಕುರಿತಂತೆ ಮತ್ತು ಶಾಲೆಯಿಂದ ಹೊರಗುಳಿಯದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಪರೀಶೀಲನೆ ನಡೆಸಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಎಚ್ಚರವಹಿಸಬೇಕು. ಅಲ್ಪ ಸಂಖ್ಯಾತ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು. ಕಳೆದ 10 ವರ್ಷಗಳ ವಿದ್ಯಾರ್ಥಿಗಳ ದಾಖಲಾತಿ, ಶಾಲೆ ಬಿಟ್ಟವರ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದವರ ವಿವರಗಳನ್ನೊಳಗೊಂಡ ವರದಿಯನ್ನು 10 ದಿನಗಳಲ್ಲಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 