ಪ್ರಚೋದನಕಾರಿ ಸಂದೇಶ ರವಾನೆ: ಆರೋಪಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು, ಜ 10             ದಕ್ಷಿಣ ಕನ್ನಡದ ಖಾಜಿ ವಿರುದ್ಧ ವಾಟ್ಸ್‌ಆ್ಯಪ್‌ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದಕ್ಕಾಗಿ ಓರ್ವ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.ವರದಿಗಳ ಪ್ರಕಾರ, ಅಪರಾಧಿ ಹಸನ್ ದಕ್ಷಿಣ ಕನ್ನಡ ಖಾಜಿ ವಿರುದ್ಧ ಡಿಸೆಂಬರ್ 31 ರಂದು ವಾಟ್ಸಾಪ್ ಗುಂಪಿನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ರವಾನಿಸಿದ್ದು, ಆತನ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಹಲವಾರು ವಿಭಾಗಗಳ ಅಡಿಯಲ್ಲಿ  ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.