ಲೋಕದರ್ಶನ ವರದಿ
ಹೊನ್ನಾವರ 12: ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರಾದ ಪರಿಹಾರ ಧನದ ಚೆಕ್ ವಿತರಣೆ ಕಾರ್ಯಕ್ರಮ ಪಟ್ಟಣದ ತಾಲೂಕಾ ಪಂಚಾಯಿತಿಯಲ್ಲಿರುವ ಶಾಸಕರ ಕಚೇರಿಯಲ್ಲಿ ನಡೆಯಿತು.
11 ಫಲಾನುಭವಿಗಳಿಗೆ ಒಟ್ಟು 2.48 ಲಕ್ಷ ರೂ.ಗಳ ಪರಿಹಾರ ಚೆಕ್ ಅನ್ನು ಶಾಸಕ ಸುನೀಲ ನಾಯ್ಕ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪರಿಹಾರದ ಹಣವನ್ನು ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಹೊನ್ನಾವರ ಮಂಡಲದ ಅಧ್ಯಕ್ಷ ಸುಬ್ರಾಯ ನಾಯ್ಕ, ಉಪಾಧ್ಯಕ್ಷ ಬಿ.ಟಿ. ಗಣಪತಿ ನಾಯ್ಕ, ಸ್ಲಂ ಮೋಚರ್ಾ ಜಿಲ್ಲಾ ಕಾರ್ಯದಶರ್ಿ ಶ್ರೀಧರ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
ಫೋಟೋ ಇದೆ 12 ಹೆಚ್ ಎನ್ ಆರ್ 1: ಹೊನ್ನಾವರದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಚೆಕ್ಗಳನ್ನು ಶಾಸಕ ಸುನೀಲ ನಾಯ್ಕ ವಿತರಿಸಿದರು.