ವಿಜಯಪುರಕ್ಕೆ 371(ಜೆ) ಮೀಸಲಾತಿಗೆ ಆಗ್ರಹ
Demand for 371(J) reservation for Vijayapura
ಲೋಕದರ್ಶನ ವರದಿ
ದೇವರ ಹಿಪ್ಪರಗಿ 22: ವಿಜಯಪುರ ಜಿಲ್ಲೆಯನ್ನು ಸಂವಿಧಾನದ 371 (ಜೆ) ವಿಶೇಷ ಮೀಸಲಾತಿ ವ್ಯಾಪ್ತಿಗೆ ಸೇರೆ್ಡಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ಮುಖ್ಯಮಂತ್ರಿ ಅವರ ಮನವೊಲಿಸಿ ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ಮುಖಂಡರು ದೇವರ ಹಿಪ್ಪರಗಿ ಶಾಸಕರಾದ ರಾಜುಗೌಡ ಪಾಟೀಲ ಅವರನ್ನು ಒತ್ತಾಯಿಸಿದರು.
ಈ ಕುರಿತು ಹೋರಾಟ ಸಮಿತಿ ಮುಖಂಡರು ಶಾಸಕರಿಗೆ ಮನವಿ ಸಲ್ಲಿಸಿದರು. ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಗೆ ಸೇರೆ್ಡಗೊಳಿಸುವವರೆಗೆ ತಾತ್ಕಾಲಿಕವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ದೊರೆಯುವ ಸೌಲಭ್ಯಗಳು, ವಿಶೇಷ ಅನುದಾನ ಹಾಗೂ ಅಭಿವೃದ್ಧಿ ಯೋಜನೆಗಳನ್ನು ವಿಜಯಪುರ ಜಿಲ್ಲೆಗೂ ವಿಸ್ತರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಮನವಿ ಸ್ವೀಕರಿಸಿದ ಶಾಸಕ ರಾಜು ಗೌಡ ಪಾಟೀಲ್ ಅವರು ಹೋರಾಟ ಸಮಿತಿಯ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ವಿಜಯಪುರ ಜಿಲ್ಲೆಗೆ 371 (ಜೆ) ಮೀಸಲಾತಿ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟಗಾರ ರೈತ ಸಂಘದ ಜಿಲ್ಲಾಧ್ಯಕ್ಷರಾದ ಸಿದ್ದನಗೌಡ ಜಲಪೂರ, ಹೈದರಾಬಾದ್ ನಿಜಾಮನ ದುರಾಡಳಿತಕ್ಕೆ ವಿಜಯಪುರ ಜಿಲ್ಲೆಯೂ ಒಳಪಟ್ಟಿದ್ದರಿಂದ ಜಿಲ್ಲೆಯು ಇಂದಿಗೂ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಹಿಂದುಳಿದಿದೆ. ಅಭಿವೃದ್ಧಿಯಲ್ಲಿಯೂ ನೀರೀಕ್ಷಿತ ಮಟ್ಟದ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ವಿಜಯಪುರ ಜಿಲ್ಲೆಯ ಸುಮಾರು 25 ಲಕ್ಷ ಜನರ ಹಿತದೃಷ್ಟಿಯಿಂದ 371 (ಜೆ) ವಿಶೇಷ ಮೀಸಲಾತಿ ಅಗತ್ಯವಾಗಿದೆ. ವಿಶೇಷವಾಗಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯಗಳು, ಯುವಕರಿಗೆ ಉದ್ಯೋಗಾವಕಾಶಗಳು, ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ, ವಿಶೇಷ ಅನುದಾನ ಹಾಗೂ ಅಭಿವೃದ್ಧಿ ಯೋಜನೆಗಳ ಸೌಲಭ್ಯ ದೊರೆಯಬೇಕಿದೆ. ಜಿಲ್ಲೆಯ ಮಕ್ಕಳ ಭವಿಷ್ಯ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಸಂವಿಧಾನದ 371 (ಜೆ)ಗೆ ತಿದ್ದುಪಡಿ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ಕಳುಹಿಸಿ ವಿಜಯಪುರ ಜಿಲ್ಲೆಗೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.
ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕದ ವಿಶೇಷ ಸೌಲಭ್ಯಗಳ ವ್ಯಾಪ್ತಿಗೆ ತರಲು ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೋರಾಟಗಾರರು ಆಗ್ರಹಿಸಿದರು. ಈ ಸಂದರ್ಭದಲ್ಲಿ ನಿಂಗಣ್ಣ ಸಾಹುಕಾರ ಹುಲಸಗುಂದ, ಶರಣಗೌಡ ತುಂಬಗಿ, ಪರಶುರಾಮ್ ವಡ್ಡರ್, ಸದಾಶಿವ ತುಂಬಗಿ ಹಾಗೂ ಬಸವರಾಜ ಉಕ ನಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 