ಸಚಿನ್ ಪಾಟೀಲರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಗ್ರಹ
Demand for Sachin Patil as District Congress President
ಗದಗ, ಆಗಸ್ಟ್ 9: ಗದಗ ಜಿಲ್ಲಾ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲು ಹಾಗೂ ಮುಂಬರುವ ಸಾರ್ವತ್ರಿಕ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷವನ್ನು ಸಂಘಟಿಸಲು ಸಚಿನ್ ಡಿ. ಪಾಟೀಲ ಅವರ ನಾಯಕತ್ವ ಅಗತ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತ ಕೃಷ್ಣ ಎಚ್. ಹಡಪದ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು, ಎಐಸಿಸಿ ವೀಕ್ಷಕರು ಹಾಗೂ ಪಕ್ಷದ ಹೈಕಮಾಂಡ್ ಗದಗ ಜಿಲ್ಲೆಗೆ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸುತ್ತಿದ್ದು, ಜಿಲ್ಲೆಯ ಕಾರ್ಯಕರ್ತರ ಒಮ್ಮತದ ಅಭಿಪ್ರಾಯವನ್ನು ಪರಿಗಣಿಸಿ ಸಚಿನ್ ಡಿ. ಪಾಟೀಲ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಬೇಕು ಎಂದು ಒತ್ತಾಯಿಸಿದರು.
ಶೈಕ್ಷಣಿಕ ಕ್ಷೇತ್ರದಲ್ಲಿಯೂ ಗಮನಾರ್ಹ ಸೇವೆ ಸಲ್ಲಿಸಿರುವ ಸಚಿನ್ ಪಾಟೀಲ ಅವರು ಕೆ.ಎಚ್. ಪಾಟೀಲ ಕಾಲೇಜು ಹಾಗೂ ಪಾಲಿಟೆಕ್ನಿಕ್ ಸಂಸ್ಥೆಗಳ ಮೂಲಕ ಗ್ರಾಮೀಣ ಭಾಗದ ಬಡ, ದಲಿತ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಯಾವುದೇ ದೇಣಿಗೆ ಇಲ್ಲದೆ ಒದಗಿಸುತ್ತಿದ್ದಾರೆ ಎಂದು ಹಡಪದ ಹೇಳಿದರು.
ಸಚಿನ್ ಪಾಟೀಲ ಅವರು ಯುವ ಕಾಂಗ್ರೆಸ್‌ನಿಂದಲೇ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದು, ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ನಿರಂತರ ಪರಿಶ್ರಮದಿಂದ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ನಗರಸಭೆ ಹಾಗೂ ಪುರಸಭೆಗಳಲ್ಲಿ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದಾರೆ ಎಂದು ಅವರು ತಿಳಿಸಿದರು.
ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಪ್ರೀತಿ ಮತ್ತು ವಿಶ್ವಾಸದಿಂದ ಬಗೆಹರಿಸಿ, ಎಲ್ಲ ಕಾರ್ಯಕರ್ತರನ್ನು ಒಗ್ಗೂಡಿಸುವ ಸಾಮರ್ಥ್ಯ ಸಚಿನ್ ಪಾಟೀಲ ಅವರಲ್ಲಿದೆ. ಜನಪ್ರಿಯತೆ, ಶೈಕ್ಷಣಿಕ ಕಾಳಜಿ ಹಾಗೂ ಪಕ್ಷದ ಶಿಸ್ತನ್ನು ಹೊಂದಿರುವ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿ ಎಂದು ಕೃಷ್ಣ ಹಡಪದ ಅಭಿಪ್ರಾಯಪಟ್ಟರು.
ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಹನುಮಂತಪ್ಪ ರಾಮಪುರ ಮಾತನಾಡಿ, ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಏಳಿಗೆ ಹಾಗೂ ತಳಮಟ್ಟದ ಕಾರ್ಯಕರ್ತರ ಪರವಾಗಿ ಧ್ವನಿ ಎತ್ತಿದ ಬಿ.ಕೆ. ಹರಿಪ್ರಸಾದ್ ಅವರ ಸಿದ್ಧಾಂತಗಳಿಗೆ ಗದಗ ಜಿಲ್ಲೆಯಲ್ಲಿ ಸಚಿನ್ ಡಿ. ಪಾಟೀಲ ಅವರ ನಾಯಕತ್ವ ಪೂರಕವಾಗಿದೆ ಎಂದರು.
ಕಾರ್ಯಕರ್ತ ಅರುಣ ರಾಮಪುರ ಕೂಡ ಸಚಿನ್ ಪಾಟೀಲ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡುವುದು ಪಕ್ಷದ ಸಂಘಟನಾ ಬಲವರ್ಧನೆ ಹಾಗೂ ಸರ್ವಜನಾಂಗದ ಒಗ್ಗಟ್ಟಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 