ವೇತನ ಜಾರಿಗೊಳಿಸಲು ಒತ್ತಾಯ: 13 ಬೇಡಿಕೆಗಳ ಈಡೇರಿಕೆಗೆ ಗ್ರಾಮ ಪಂಚಾಯಿತಿ ನೌಕರರ ಆಗ್ರಹ
Demand for Salary Implementation: Gram Panchayat Employees Press for Fulfillment of 13 Demands
ಲೋಕದರ್ಶನ ವರದಿ
ಬಳ್ಳಾರಿ, ಆ. 18: ಕಳೆದ ಏಳೆಂಟು ವರ್ಷಗಳಿಂದ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವ ಗ್ರಾಮ ಪಂಚಾಯಿತಿ ನೌಕರರಿಗೆ ಮೇ 22ರಂದು ಸರ್ಕಾರ ಹೊರಡಿಸಿರುವ ವೇತನ ಪರಿಷ್ಕರಣೆ ಆದೇಶದಂತೆ ಕೂಡಲೇ ವೇತನ ಜಾರಿಗೊಳಿಸಬೇಕು ಹಾಗೂ ನೌಕರರ 13 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ (ಅಋಗ ಸಂಯೋಜಿತ) ಬಳ್ಳಾರಿ ಜಿಲ್ಲಾ ಸಮಿತಿ ಆಗ್ರಹಿಸಿದೆ.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಸಂಘದ ವತಿಯಿಂದ ಧರಣಿ ನಡೆಸಿ, ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಸಂಘದ ಬಳ್ಳಾರಿ ಜಿಲ್ಲಾ ಸಮಿತಿ ಅಧ್ಯಕ್ಷ ಕಾಮ್ರೇಡ್ ಕುಮಾರ್ ಎ.ಎಸ್. ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಗ್ರಾಮ ಪಂಚಾಯಿತಿ ನೌಕರರು ಭಾಗವಹಿಸಿದ್ದರು.
ಪ್ರಸ್ತುತ ದೊರೆಯುತ್ತಿರುವ ವೇತನದಲ್ಲಿ ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ ಹಾಗೂ ಆರೋಗ್ಯ ವೆಚ್ಚ ಭರಿಸುವುದು ಕಷ್ಟವಾಗಿದೆ. ಮೇ 22ರಂದು ಸರ್ಕಾರ ವೇತನ ನಿಗದಿಪಡಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ನೌಕರರಲ್ಲಿ ಆಶಾಭಾವನೆ ಮೂಡಿತ್ತು. ಆದರೆ ಆ ಆದೇಶವನ್ನು ಸಚಿವ ಸಂಪುಟ ಸಭೆಯಲ್ಲಿ ಪರೀಶೀಲಿಸುವ ಕುರಿತು ಚರ್ಚೆ ನಡೆಯುತ್ತಿರುವುದು ನೌಕರರಲ್ಲಿ ನಿರಾಸೆ ಮೂಡಿಸಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.
ಸರ್ಕಾರದ ಆದೇಶದಂತೆ ಕೂಡಲೇ ವೇತನ ಜಾರಿಗೊಳಿಸುವ ಮೂಲಕ ಆರ್ಥಿಕ ಸಂಕಷ್ಟದಲ್ಲಿರುವ ನೌಕರರಿಗೆ ಸರ್ಕಾರ ನೆರವಾಗಬೇಕು ಎಂದು ಒತ್ತಾಯಿಸಲಾಯಿತು. ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗಾರರು, ಕ್ಲರ್ಕ್ ಕಮ್ ಡಾಟಾ ಎಂಟ್ರಿ ಆಪರೇಟರ್ಗಳು, ನೀರುಗಂಟಿಗಳು, ಜವಾನರು ಹಾಗೂ ಸ್ವಚ್ಛತಾಗಾರರನ್ನು ಏಕಕಾಲದಲ್ಲಿ ಸರ್ಕಾರಿ ನೌಕರರೆಂದು ಘೋಷಿಸಬೇಕು ಎಂದು ಆಗ್ರಹಿಸಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 