ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲಸಂಪನ್ಮೂಲ ಸಚಿವ ಸ್ಥಾನಕ್ಕೆ ಆಗ್ರಹ

ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಜಲಸಂಪನ್ಮೂಲ ಸಚಿವ ಸ್ಥಾನಕ್ಕೆ ಆಗ್ರಹ  Demand for a separate Water Resources Minister post for North Karnataka


ವಿಜಯಪುರ 01 : ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಿ ರೈತರಿಗೆ ಸಮರ​‍್ಕ ನೀರು ಒದಗಿಸಲು ಉತ್ತರ ಕರ್ನಾಟಕದ ಶಾಸಕರೊಬ್ಬರಿಗೆ ಪ್ರತ್ಯೇಕ ಜಲಸಂಪನ್ಮೂಲ ಸಚಿವ ಸ್ಥಾನ ನೀಡಬೇಕು ಎಂದು ನೀರಾವರಿ ತಜ್ಞ ಡಾ. ಕೃಷ್ಣ ಕೋಲ್ಹಾರ ಕುಲಕರ್ಣಿ ಆಗ್ರಹಿಸಿದರು. ವಿಜಯಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಸರ್ಕಾರಗಳು ನಿರ್ಲಕ್ಷ್ಯ ವಹಿಸಿವೆ ಎಂದು ಆರೋಪಿಸಿದರು. ಆಲಮಟ್ಟಿ, ತುಂಗಭದ್ರಾ, ಹಿಡಕಲ್ ಸೇರಿದಂತೆ ಪ್ರಮುಖ ಜಲಾಶಯಗಳಿದ್ದರೂ ಉತ್ತರ ಕರ್ನಾಟಕದ ರೈತರಿಗೆ ಸಮರ​‍್ಕ ನೀರು ದೊರೆಯುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕಕ್ಕೆ ಶಾಶ್ವತವಾಗಿ ಪ್ರತ್ಯೇಕ ಜಲಸಂಪನ್ಮೂಲ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಆಲಮಟ್ಟಿ ಜಲಾಶಯ ಬಹುತೇಕ ಭರ್ತಿಯಾಗಿದ್ದರೂ ಬಾಗಿನ ಅರೆ​‍್ಣ ಹಾಗೂ ಕೃಷ್ಣಾ ಆರತಿ ಕುರಿತು ಸರ್ಕಾರ ಕ್ರಮ ಕೈಗೊಂಡಿಲ್ಲ. ಪ್ರತ್ಯೇಕ ಜಲಸಂಪನ್ಮೂಲ ಖಾತೆ ನೀಡಿದರೆ ಬಾಕಿ ಇರುವ ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಲು ಅನುಕೂಲವಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುರುರಾಜ ಪಡಶೆಟ್ಟಿ ಉಪಸ್ಥಿತರಿದ್ದರು.