ಬಂಗ್ಲೆ ಮಲ್ಲಿಕಾರ್ಜುನ ವಿರುದ್ಧ ಕ್ರಮಕ್ಕೆ ಆಗ್ರಹ
Demand for action against Bungle Mallikarjuna
ವಿಜಯಪುರ 08: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ವಿರುದ್ಧ ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ’ ಹೆಸರಿನಲ್ಲಿ ದೂರು ನೀಡಿರುವುದನ್ನು ಖಂಡಿಸಿ, ಬಂಗ್ಲೆ ಮಲ್ಲಿಕಾರ್ಜುನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ಬಂಗ್ಲೆ ಮಲ್ಲಿಕಾರ್ಜುನ ಅವರು ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪದಡಿ ಬಳ್ಳಾರಿಯ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿರಗುಪ್ಪದಲ್ಲಿಯೂ ಪೊಲೀಸ್ ಪ್ರಕರಣ ದಾಖಲಾಗಿದ್ದು, ಬಳಿಕ ಅವರು ಊರು ತೊರೆದಿದ್ದರು. ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ ಸಾರ್ವಜನಿಕವಾಗಿ ಕ್ಷಮೆ ಕೇಳಿ ಪ್ರಕರಣದಿಂದ ಪಾರಾಗಿರುವುದು ಇನ್ನೂ ಹಸಿಯಾಗಿದೆ ಎಂದು ಹೇಳಿದರು.
ಚುನಾವಣಾ ಪ್ರಕ್ರಿಯೆ ಮೂಲಕ ಆಯ್ಕೆಯಾಗಿರುವ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ವಿರುದ್ಧ ಆಧಾರರಹಿತ ದೂರು ನೀಡಿರುವುದು ಖಂಡನೀಯ. ಉದ್ದೇಶಪೂರ್ವಕವಾಗಿ ಅವರ ತೇಜೋವಧೆಗೆ ಮುಂದಾಗಿರುವ ಬಂಗ್ಲೆ ಮಲ್ಲಿಕಾರ್ಜುನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಸಹಯೋಗ ಹೊಂದಿರುವ ಹಾಗೂ ಸರ್ಕಾರದ ಮಾನ್ಯತೆ ಪಡೆದ ಪತ್ರಕರ್ತರ ಸಂಘಟನೆಯಾಗಿದೆ. ಪತ್ರಕರ್ತರ ಹಾಗೂ ಸಂಘದ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಶಿವಾನಂದ ತಗಡೂರು ಅವರ ವಿರುದ್ಧ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ತೇಜೋವಧೆಗೆ ಯತ್ನಿಸಿರುವ ಬಂಗ್ಲೆ ಮಲ್ಲಿಕಾರ್ಜುನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿ ಸದಸ್ಯ ಪ್ರಕಾಶ ಬೆಣ್ಣೂರ, ಜಿಲ್ಲಾ ಉಪಾಧ್ಯಕ್ಷರಾದ ಶಶಿಕಾಂತ ಮೆಂಡೆಗಾರ, ಬಸವರಾಜ ಉಳ್ಳಾಗಡ್ಡಿ, ಸಮೀರ ಇನಾಮದಾರ, ಜಿಲ್ಲಾ ಖಜಾಂಚಿ ರಾಹುಲ ಆಪ್ಟೆ, ಜಿಲ್ಲಾ ಕಾರ್ಯದರ್ಶಿ ಸದ್ದಾಂ ಜಮಾದಾರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗುರು ಗದ್ದನಕೇರಿ, ಸಂಜೀವ ಕುಲಕರ್ಣಿ, ಗೋಪಾಲ ಕನಿಮಣಿ, ಶಂಕರ ಜಲ್ಲಿ, ಶಿವಾನಂದ ಶಿವಶರಣ, ಸುರೇಶ ತೇರದಾಳ, ಪ್ರಭು ಕುಮಟಗಿ ಸೇರಿದಂತೆ ಪತ್ರಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 