ಬೆಳೆ ವಿಮೆ ಯೋಜನೆಯಲ್ಲಿ ರೈತರಿಗೆ ಸಹಕಾರ ನೀಡದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
Demand for action against bank officials who failed to assist farmers with the crop insurance scheme
ರಾಣೆಬೆನ್ನೂರು, ಜು16: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಪುನರ್ರಚಿತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿಯಲ್ಲಿ ರೈತರಿಗೆ ಸಮರ್ಕ ಸೇವೆ ನೀಡದೆ, ಬೆಳೆ ವಿಮೆ ನೋಂದಣಿಯಲ್ಲಿ ವಿಳಂಬ ಮಾಡುತ್ತಿರುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಎಫ್. ಪಾಟೀಲ್ ಒತ್ತಾಯಿಸಿದರು.
ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ ಅವರು, ಕೇಂದ್ರ ಸರ್ಕಾರದ ಆದೇಶಗಳಿದ್ದರೂ ಕೆಲವು ಬ್ಯಾಂಕ್ ಅಧಿಕಾರಿಗಳು ರೈತರಿಗೆ ಅನಗತ್ಯ ತೊಂದರೆ ನೀಡುತ್ತಿದ್ದು, ಬೆಳೆ ವಿಮೆ ಪ್ರಕ್ರಿಯೆಯಲ್ಲಿ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿರುವ ಹಿನ್ನೆಲೆ ಬರಗಾಲದ ಆತಂಕ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಬೆಳೆ ವಿಮೆ ಯೋಜನೆ ರೈತರಿಗೆ ರಕ್ಷಾಕವಚವಾಗಿದ್ದು, ವಿಮೆ ಪ್ರೀಮಿಯಂ ಪಾವತಿಗೆ ನಿಗದಿಪಡಿಸಿದ ದಿನಾಂಕ ಸಮೀಪಿಸುತ್ತಿರುವುದರಿಂದ ಬ್ಯಾಂಕ್ಗಳು ರೈತರಿಗೆ ತಕ್ಷಣ ಸಹಕಾರ ನೀಡಬೇಕು ಎಂದು ಅವರು ಹೇಳಿದರು.
ಸಾಲ ಪಡೆಯದ ರೈತರು ಸ್ವಯಂ ಘೋಷಣಾ ಪತ್ರ ಸೇರಿದಂತೆ ಹೆಚ್ಚುವರಿ ದಾಖಲೆಗಳ ಹೆಸರಿನಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದ ಅವರು, ಕಾನೂನುಬಾಹಿರ ನಿಯಮಗಳನ್ನು ಹೇರಬಾರದು ಎಂದು ಎಚ್ಚರಿಸಿದರು. ರೈತರಿಗೆ ಬೆಳೆ ವಿಮೆ ಸೌಲಭ್ಯ ನಿರಾಕರಿಸಿದರೆ ಸಂಬಂಧಿಸಿದ ಬ್ಯಾಂಕ್ಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ. ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಬ್ಯಾಂಕ್ ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಹಾಗೂ ಯಾವುದೇ ರೈತರು ಬೆಳೆ ವಿಮೆ ಯೋಜನೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 