ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಕ್ರಮಕ್ಕೆ ಆಗ್ರಹ
Demand for action to sell fertilizer at higher prices
ತಾಳಿಕೋಟೆ 23: ಮುಂಗಾರು ಮಳೆ ಪ್ರಾರಂಭವಾಗಿದ್ದು ರೈತರಿಗೆ ಅಗತ್ಯದ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಸರ್ಕಾರ ನಿಗದಿಗೊಳಿಸಿದ ದರದಲ್ಲಿ ಒದಗಿಸುವಂತೆ ಹಾಗೂ ನಿಗದಿದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಯಕರ್ನಾಟಕ ಜನಪರವೇದಿಕೆಯು ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಸಲ್ಲಿಸಿದರು.
ಮನವಿಪತ್ರದಲ್ಲಿ ಬಿತ್ತನೆಗಾಗಿ ಬೀಜ ಹಾಗೂ ರಸಗೊಬ್ಬರವನ್ನು ಖರೀದಿಸಲು ರೈತ ಸಂಪರ್ಕ ಕೇಂದ್ರಗಳಿಗೆ ಹಾಗೂ ಖಾಸಗಿ ಮಾರಾಟ ಮಳಿಗೆಗಳಿಗೆ ತೆರಳುತ್ತಿದ್ದಾರೆ. ಆದರೆ ಅನೇಕ ಕಡೆಗಳಲ್ಲಿ ರೈತರಿಗೆ ರಸಗೊಬ್ಬರ ಲಭ್ಯವಿಲ್ಲ ಎಂದು ತಿಳಿಸಿ, ಸರ್ಕಾರ ನಿಗದಿಪಡಿಸಿದ ಅಧಿಕೃತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವುದು ಕಂಡು ಬರುತ್ತದೆ.
ಇದರಿಂದ ಬಡ ಮತ್ತು ಮಧ್ಯಮ ವರ್ಗದ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದು ಕೃಷಿ ಚಟುವಟಿಗಳ ಮೇಲೆಯು ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ತುರ್ತು ಕ್ರಮ ಕೈಕೊಂಡು ರೈತರಿಗೆ ನ್ಯಾಯ ಒದಗಿಸಬೇಕೆಂದು ಹಾಗೂ ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳ ಮುಂದೆ ಕಡ್ಡಾಯವಾಗಿ ಬೀಜ ಹಾಗೂ ರಸಗೊಬ್ಬರಗಳ ದರಪಟ್ಟಿ ಮತ್ತು ಲಭ್ಯವಿರುವ ಸ್ಟಾಕ್ ವಿವರವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವಂತೆ ಕ್ರಮ ಕೈಗೊಳ್ಳಬೇಕು.
ಹಾಗೆಯೇ ಹತ್ತಿ ಬೀಜ ಸೇರಿದಂತೆ ಇತರೆ ಎಲ್ಲಾ ಬೀಜಗಳ ಅಧಿಕೃತ ದರಪಟ್ಟಿಯನ್ನು ಪ್ರದರ್ಶಿಸಿ, ಸರ್ಕಾರ ನಿಗದಿಪಡಿಸಿದ ಬೆಲೆಯಲ್ಲಿಯೇ ಮಾರಾಟವಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಜಯಕರ್ನಾಟಕ ಜನಪರವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷಬಸವರಾಜ ಸಿಂಗನಳ್ಳಿ, ಜಿಲ್ಲಾ ಕಾರ್ಯಾಧ್ಯಕ್ಷ ಬಾಪುಗೌಡ ಎಸ್.ಪಾಟೀಲ ಮೊದಲಾದವರು ವಿನಂತಿಸಿದರು.
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ 