ವಿಮೆ ಕಟ್ಟಲಾಗದ ರೈತರಿಗೆ ಪರಿಹಾರ ಕೊಡಲು ಆಗ್ರಹ
Demand for compensation for farmers unable to pay insurance premiums
ಲೋಕದರ್ಶನ ವರದಿ
ಹೂವಿನ ಹಡಗಲಿ ೨೪: ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ನೀಡುವ ಸಂದರ್ಭದಲ್ಲಿ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಮಾತ್ರ ಆದ್ಯತೆ ನೀಡದೆ, ಆರ್ಥಿಕ ಸಂಕಷ್ಟದಿAದ ಬೆಳೆ ವಿಮೆ ಪಾವತಿಸಲು ಸಾಧ್ಯವಾಗದ ರೈತರಿಗೂ ಸರ್ಕಾರ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವರಾಜ ಎಂ. ಹೊಳಗುಂದಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಹುತೇಕ ಸಣ್ಣ ಮತ್ತು ಅತಿಸಣ್ಣ ರೈತರು ಆರ್ಥಿಕ ಸಂಕಷ್ಟದಲ್ಲಿದ್ದು, ಬೆಳೆ ವಿಮೆ ಪಾವತಿಸುವಷ್ಟು ಹಣಕಾಸಿನ ಸಾಮರ್ಥ್ಯ ಹೊಂದಿರುವುದಿಲ್ಲ. ಆದರೆ ಪ್ರಕೃತಿ ವಿಕೋಪ, ಮಳೆ ಕೊರತೆ ಅಥವಾ ಅತಿವೃಷ್ಟಿಯಿಂದ ಅವರ ಬೆಳೆಗಳು ಹಾನಿಗೊಳಗಾದಾಗ ಅವರು ಕೂಡ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಾರೆ.
ವಿಮೆ ಮಾಡಿಸಿಲ್ಲ ಎಂಬ ಒಂದೇ ಕಾರಣಕ್ಕೆ ಬೆಳೆ ಹಾನಿಗೊಳಗಾದ ರೈತರನ್ನು ಪರಿಹಾರದಿಂದ ವಂಚಿಸುವುದು ನ್ಯಾಯಸಮ್ಮತವಲ್ಲ. ಬೆಳೆ ಹಾನಿಗೊಳಗಾದ ಪ್ರತಿಯೊಬ್ಬ ರೈತನ ಜಮೀನಿನಲ್ಲೂ ಸಮರ್ಪಕವಾಗಿ ಸ್ಥಳ ಪರಿಶೀಲನೆ ಹಾಗೂ ವೈಜ್ಞಾನಿಕ ಬೆಳೆ ಹಾನಿ ಸಮೀಕ್ಷೆ ನಡೆಸಿ, ವಿಮೆ ಮಾಡಿಸಿದ್ದಾರೆಯೇ ಇಲ್ಲವೇ ಎಂಬ ಭೇದವಿಲ್ಲದೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸರ್ಕಾರ ಕೂಡಲೇ ಬೆಳೆ ಹಾನಿ ಸಮೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸಮರ್ಪಕವಾಗಿ ನಡೆಸಬೇಕು. ವಿಮೆ ಕಟ್ಟಲಾಗದ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ವಿಶೇಷ ಪರಿಹಾರ ವ್ಯವಸ್ಥೆ ರೂಪಿಸಿ, ಸಂಕಷ್ಟದಲ್ಲಿರುವ ಎಲ್ಲ ರೈತರಿಗೆ ತ್ವರಿತವಾಗಿ ಪರಿಹಾರ ಹಣ ಬಿಡುಗಡೆ ಮಾಡಬೇಕು.
ರೈತರ ಸಂಕಷ್ಟವನ್ನು ವಿಮೆ ಕಟ್ಟಿದ್ದಾರೆಯೇ ಇಲ್ಲವೇ ಎಂಬ ಮಾನದಂಡದಿAದ ಅಳೆಯದೆ, ಬೆಳೆ ಹಾನಿಯ ಪ್ರಮಾಣವನ್ನು ಆಧಾರವಾಗಿಟ್ಟುಕೊಂಡು ಪರಿಹಾರ ನೀಡಬೇಕು. ಸರ್ಕಾರ ರೈತರ ನೋವಿಗೆ ಸ್ಪಂದಿಸಿ ತಕ್ಷಣ ನ್ಯಾಯಯುತ ಪರಿಹಾರ ಒದಗಿಸಬೇಕು ಎಂದು ಶಿವರಾಜ ಎಂ. ಹೊಳಗುಂದಿ ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 