ಬರ ಘೋಷಣೆಗೆ ಆಗ್ರಹ: ಸಚಿವ ರಾಯರೆಡ್ಡಿ ವಿರುದ್ಧ ಬಿಜೆಪಿ ಸಮರಶಂಖ
Demand for drought declaration: BJP sounds battle cry against Minister Rayareddy
ಯಲಬುರ್ಗಾ, ಸೆ.16: ತಾಲೂಕಿನಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿರುವುದರಿಂದ ರೈತರು ಹಾಗೂ ಬಡ ಕೂಲಿ ಕಾರ್ಮಿಕ ಕುಟುಂಬಗಳು ಜೀವನ ನಿರ್ವಹಣೆಗೆ ಸಂಕಷ್ಟ ಅನುಭವಿಸುತ್ತಿವೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ಯಲಬುರ್ಗಾ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಲ್ಲಿ ಸಚಿವ ಬಸವರಾಜ ರಾಯರೆಡ್ಡಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಾರುತಿ ಗಾವರಾಳ ಆರೋಪಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಬರಪೀಡಿತ ತಾಲೂಕುಗಳ ಎರಡನೇ ಪಟ್ಟಿಯಲ್ಲಿಯೂ ಯಲಬುರ್ಗಾ ತಾಲೂಕನ್ನು ಸೇರಿಸದಿರುವುದು ಸಚಿವರ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು.
ಅಭಿವೃದ್ಧಿ ಹೆಸರಿನಲ್ಲಿ ಅನಗತ್ಯ ಕಾಮಗಾರಿಗಳಿಗೆ ಸರ್ಕಾರದ ಹಣ ವ್ಯಯಿಸಲಾಗುತ್ತಿದೆ. ಆದರೆ ಬರದಿಂದ ಸಂಕಷ್ಟದಲ್ಲಿರುವ ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಅಗತ್ಯ ಪರಿಹಾರ ಕ್ರಮಗಳಿಗೆ ಆದ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿದರು. ಜನರ ಸಮಸ್ಯೆಗಳನ್ನು ಹೇಳಿಕೊಳ್ಳಲು ನಡೆಯುವ ಜನಸ್ಪಂದನ ಸಭೆಗಳಲ್ಲಿ ಸಚಿವರು ಜನರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪವನ್ನೂ ಮಾಡಿದರು.
ಬಿಜೆಪಿ ಮುಖಂಡ ವೀರಣ್ಣ ಹುಬ್ಬಳ್ಳಿ ಮಾತನಾಡಿ, ಸೆ.18ರಂದು ಯಲಬುರ್ಗಾ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು. ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸದಿದ್ದರೆ ಪ್ರತಿ ಗ್ರಾಮದಲ್ಲಿಯೂ ಸಚಿವರ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ರತ್ನ ದೇಶಾಯಿ, ಬಸವರಾಜ ರಾಜೂರು, ವಿಶ್ವನಾಥ ಮರಿಬಸಪ್ಪನವರ್, ಶರಣಪ್ಪ ಈಳಿಗೇರ್, ಶಿವಕುಮಾರ ನಾಗಲಾಪೂರಮಠ, ಶಂಭು ಜೋಳದ, ಅಮರೇಶ ಹುಬ್ಬಳ್ಳಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 