ಗ್ರಾಮ ಪಂಚಾಯಿತಿ ಆಡಳಿತ ಅವಧಿ ವಿಸ್ತರಣೆಗೆ ಆಗ್ರಹ
Demand for extension of Gram Panchayat administration term
ದೇವರಹಿಪ್ಪರಗಿ 22: ಗ್ರಾಮ ಪಂಚಾಯಿತಿಯ ಆಡಳಿತ ಅವಧಿಯನ್ನು ಕನಿಷ್ಠ ಆರು ತಿಂಗಳ ಕಾಲ ಮುಂದುವರಿಸುವಂತೆ ತಾಲೂಕಿನ ಚಿಕ್ಕರೂಗಿ ಗ್ರಾಪಂ ಅಧ್ಯಕ್ಷ ಸಿದ್ದಗೊಂಡಪ್ಪಗೌಡ ಪಾಟೀಲ ಆಗ್ರಹಿಸಿದರು. ಈ ಕುರಿತು ಚಿಕ್ಕರೂಗಿ ಗ್ರಾ.ಪಂ ಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಸ್ತುತ ಗ್ರಾಮ ಪಂಚಾಯಿತಿಯಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಅವುಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಸಮಯ ಅಗತ್ಯವಿದೆ. ಅಲ್ಲದೆ, ಪಂಚಾಯಿತಿಯ ಆಡಳಿತ ಅವಧಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಚುನಾವಣೆ ಪ್ರಕ್ರಿಯೆ ಆರಂಭವಾದರೆ ಅಭಿವೃದ್ಧಿ ಕಾರ್ಯಗಳಿಗೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಚಿಕ್ಕರೂಗಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಚರಂಡಿ ವ್ಯವಸ್ಥೆ, ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಸಂಬಂಧಿತ ಕೆಲಸಗಳು ಇನ್ನೂ ಪೂರ್ಣಗೊಳ್ಳಬೇಕಿರುವುದರಿಂದ, ಇವುಗಳಿಗೆ ನಿರಂತರ ಆಡಳಿತ ಅಗತ್ಯವಿದೆ. ಆಡಳಿತಾವಧಿಯನ್ನು ಆರು ತಿಂಗಳು ವಿಸ್ತರಿಸಿದಲ್ಲಿ ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಸಿಗಲಿದೆ ಎಂದು ಹೇಳಿದರು.ಸರ್ಕಾರವು ಜಾರಿಗೆ ತಂದಿರುವ ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದ ಸರ್ಕಾರ ಆಡಳಿತ ಅಧಿಕಾರಿಗಳನ್ನು ನೇಮಿಸದೆ.ಪ್ರಸ್ತುತ ಆಡಳಿತ ಮುಂದುವರಿಯುವುದು ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಗ್ರಾಮ ಪಂಚಾಯಿತಿಯ ಆಡಳಿತ ಅವಧಿ ವಿಸ್ತರಣೆ ಕುರಿತು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 