ರೈತರ ಸಾಲ ಮನ್ನಾಕ್ಕೆ ಆಗ್ರಹ : ಬಸವರಾಜ ರಂಜುಣಗಿ
Demand for farm loan waiver: Basavaraja Ranjunagi
ಲೋಕದರ್ಶನ ವರದಿ
ಸಿಂದಗಿ 13 : ಮಳೆಯ ಕೊರತೆಯಿಂದ ತೀವ್ರ ಹಾನಿಗೊಳಗಾದ ಪ್ರದೇಶಗಳನ್ನು ತಕ್ಷಣವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಬೆಳೆ ಹಾನಿಗೆ ಸೂಕ್ತ ಪರಿಹಾರ, ರೈತರಿಗೆ ಉಚಿತ ಮೇವು ಹಾಗೂ ಕುಡಿಯುವನೀರಿನ ವ್ಯವಸ್ಥೆ, ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್ ಪೂರೈಕೆ, ಬೆಳೆ ವಿಮೆ ಮೊತ್ತವನ್ನು ಶೀಘ್ರದಲ್ಲಿ ವಿತರಣೆ ಹಾಗೂ ಅಗತ್ಯ ಕೃಷಿ ಸಹಾಯಧನ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಅಧ್ಯಕ್ಷ ಬಸವರಾಜ ರಂಜುಣಗಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಕೊರತೆ ಹಾಗೂ ಕೃಷಿ ಚಟುವಟಿಕೆಗಳಿಗೆ ಉಂಟಾಗಿರುವ ರೈತರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಬೆಳೆ ನಷ್ಟ ನೀರಿನ ಅಭಾವ ಮತ್ತು ಉತ್ಪಾದನಾ ವೆಚ್ಚದ ಏರಿಕೆಯಿಂದ ರೈತರು ಆರ್ಥಿಕವಾಗಿ ತೀವ್ರ ಹಿನ್ನಡೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರ ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರಗಳು ತುರ್ತು ಕ್ರಮ ಕೈಗೊಂಡು, ಸಂಕಷ್ಟದಲ್ಲಿರುವ ರೈತರಿಗೆ ಆರ್ಥಿಕ ನೆರವು ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಆಗಸ್ಟ್ 6ರ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ. ಶಿವಕುಮಾರ್
ರಾಜಸ್ಥಾನದ ಬಾಲೋತ್ರಾ-ಜೋಧ್ಪುರ ಹೆದ್ದಾರಿಯಲ್ಲಿ ಎಸ್ಯುವಿ-ಡಂಪರ್ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ 