ರೈತರ ಸಾಲಮನ್ನಾ, ಬರ ಪರಿಹಾರಕ್ಕೆ ಆಗ್ರಹ
Demand for farm loan waiver and drought relief
ಲೋಕದರ್ಶನ ವರದಿ
ವಿಜಯಪುರ ಸೆ.22: ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.
ವಿವಿಧ ಭಾಗಗಳಿಂದ ಆಗಮಿಸಿದ್ದ ರೈತ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬರದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಾತನಾಡಿದ ಎ.ಎಸ್. ಪಾಟೀಲ ನಡಹಳ್ಳಿ, ವಿಜಯಪುರ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ತೀವ್ರವಾಗಿದ್ದರೂ ಸರ್ಕಾರ ಸಮರ್ಕವಾಗಿ ಸ್ಪಂದಿಸುತ್ತಿಲ್ಲ. ಇಂಡಿ, ತಾಳಿಕೋಟೆ, ಚಡಚಣ ಸೇರಿದಂತೆ ಹಲವು ಭಾಗಗಳು ಹೆಚ್ಚು ಬರಪೀಡಿತವಾಗಿವೆ. ರಾಜ್ಯ ಸರ್ಕಾರ ಪ್ರಸಕ್ತ ಅಧಿವೇಶನದಲ್ಲೇ ವಿಜಯಪುರವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ಅನ್ನದಾತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ಸಾಲಮನ್ನಾ ಘೋಷಣೆಗೆ ರೈತರು ಬೀದಿಗಿಳಿಯುವ ಅನಿವಾರ್ಯತೆ ಸೃಷ್ಟಿಯಾಗಬಾರದು ಎಂದರು.
ಸಾವಯವ ಬೀಜ ಪ್ರಮಾಣನ ಸಂಸ್ಥೆಯ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ ಮಾತನಾಡಿ, ಬರದಿಂದ ತೀವ್ರ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ನೀಡಬೇಕು. ಬೆಳೆ ನಷ್ಟಕ್ಕೊಳಗಾದ ರೈತರಿಗೆ ಸಮರ್ಕ ಪರಿಹಾರ ಕಲ್ಪಿಸುವುದರೊಂದಿಗೆ ಕೂಡಲೇ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಸೇರಿದಂತೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಾಲರಾಜ ರೆಡ್ಡಿ ಹಾಗೂ ಪಕ್ಷದ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 