ಕುಡಿತಿನಿ ಭೂ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಆಗ್ರಹ: ನಾಳೆ ಬಳ್ಳಾರಿ ಜಿಲ್ಲಾ ಬಂದ್
Demand for fulfillment of demands of liquor land victims: Bellary district bandh tomorrow
ಬಳ್ಳಾರಿ 17: ಕುಡಿತಿನಿ ಪ್ರದೇಶದ ಏಳು ಗ್ರಾಮಗಳ ರೈತರಿಂದ ಕೈಗಾರಿಕೆಗಳ ಸ್ಥಾಪನೆ ಹೆಸರಿನಲ್ಲಿ ಸ್ವಾಧೀನಪಡಿಸಿಕೊಂಡ 12,875.09 ಎಕರೆ ಭೂಮಿಗೆ ನ್ಯಾಯಯುತ ಭೂಬೆಲೆ ನಿಗದಿಪಡಿಸದೆ ವಂಚನೆ ಮಾಡಲಾಗಿದೆ ಹಾಗೂ 16 ವರ್ಷಗಳು ಕಳೆದರೂ ಉದ್ದೇಶಿತ ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ಸೃಷ್ಟಿ ಮಾಡದ ಹಿನ್ನೆಲೆಯಲ್ಲಿ ಜೂನ್ 18ರಂದು ಬಳ್ಳಾರಿ ಜಿಲ್ಲಾ ಸಂಪೂರ್ಣ ಬಂದ್ ಸ್ವರೂಪದ ಹರತಾಳಕ್ಕೆ ಕರೆ ನೀಡಲಾಗಿದೆ ಎಂದು ಕುಡಿತಿನಿ ಪ್ರದೇಶದ ಭೂ ಸಂತ್ರಸ್ತರ ಹೋರಾಟ ಸಮಿತಿ ತಿಳಿಸಿದೆ.ಬುಧವಾರ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಹೋರಾಟ ಸಮಿತಿಯ ಮುಖಂಡರು, ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬಂದ್ ನಡೆಸಿ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 