ರೈತರ 6 ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹ
Demand for fulfillment of six key demands of farmers
ಬೆಳಗಾವಿ 11 : ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಂಕಷ್ಟಗಳಿಗೆ ಸ್ಪಂದಿಸಿ, ಅವರ 6 ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿ ಪತ್ರದಲ್ಲಿನ ಪ್ರಮುಖ ಅಂಶಗಳು: ರಾಜ್ಯದ ಉಳಿದ ಎಲ್ಲಾ ತಾಲೂಕುಗಳನ್ನು ಬರಗಾಲ ಎಂದು ಘೋಷಿಸಬೇಕು, ಪ್ರತಿ ರೈತರ ಖಾತೆಗೆ 50 ಸಾವಿರ ರೂ. ಬೆಳೆ ಪರಿಹಾರ ಜಮಾ ಮಾಡಬೇಕು, ಕಳೆದ 5 ವರ್ಷದಿಂದ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು, ರೈತರಿಗೆ 12 ಗಂಟೆಗಳ ಕಾಲ ತ್ರಿ-ಫೇಸ್ ವಿದ್ಯುತ್ ಪೂರೈಸಬೇಕು, ಕಬ್ಬಿಗೆ ಪ್ರತಿ ಟನ್ಗೆ 5500 ರೂ. ದರ ನಿಗದಿ ಮಾಡಬೇಕು ಮತ್ತು ಜಿಲ್ಲೆಯ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಸಂಘದ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಗುರುಜಿ, ರಾಜ್ಯಾಧ್ಯಕ್ಷ ಚೋನಪ್ಪ ಪೂಜೇರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಶನ ನಂದಿ, ರಾಷ್ಟ್ರೀಯ ನಾಯಕ ಪ್ರಕಾಶ ನಾಯಕ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 