ರೈತರ 6 ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹ

ರೈತರ 6 ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹ Demand for fulfillment of six key demands of farmers



ಬೆಳಗಾವಿ 11 : ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಂಕಷ್ಟಗಳಿಗೆ ಸ್ಪಂದಿಸಿ, ಅವರ 6 ಪ್ರಮುಖ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿ ಪತ್ರದಲ್ಲಿನ ಪ್ರಮುಖ ಅಂಶಗಳು: ರಾಜ್ಯದ ಉಳಿದ ಎಲ್ಲಾ ತಾಲೂಕುಗಳನ್ನು ಬರಗಾಲ ಎಂದು ಘೋಷಿಸಬೇಕು, ಪ್ರತಿ ರೈತರ ಖಾತೆಗೆ 50 ಸಾವಿರ ರೂ. ಬೆಳೆ ಪರಿಹಾರ ಜಮಾ ಮಾಡಬೇಕು, ಕಳೆದ 5 ವರ್ಷದಿಂದ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು, ರೈತರಿಗೆ 12 ಗಂಟೆಗಳ ಕಾಲ ತ್ರಿ-ಫೇಸ್ ವಿದ್ಯುತ್ ಪೂರೈಸಬೇಕು, ಕಬ್ಬಿಗೆ ಪ್ರತಿ ಟನ್‌ಗೆ 5500 ರೂ. ದರ ನಿಗದಿ ಮಾಡಬೇಕು ಮತ್ತು ಜಿಲ್ಲೆಯ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಸಂಘದ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಗುರುಜಿ, ರಾಜ್ಯಾಧ್ಯಕ್ಷ ಚೋನಪ್ಪ ಪೂಜೇರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಶನ ನಂದಿ, ರಾಷ್ಟ್ರೀಯ ನಾಯಕ ಪ್ರಕಾಶ ನಾಯಕ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.