ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ
Demand for fulfillment of various demands of farmers- Raibag News
ರಾಯಬಾಗ 09: ರೈತರ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿ.11 ರಂದು ಬೆಳ್ಳಿಗ್ಗೆ 11 ಗಂಟೆಗೆ ಬೆಳಗಾವಿ ಸುವರ್ಣ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಹೋರಾಟ ಯಶಸ್ಸುಗೊಳಿಸಬೇಕೆಂದು ರೈತ ಸಂಘದ ಚಿಕ್ಕೋಡಿ ಜಿಲ್ಲಾಧ್ಯಕ್ಷ ಮಲ್ಲಪ್ಪ ಅಂಗಡಿ ಕರೆ ನೀಡಿದರು.
ಮಂಗಳವಾರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈನುಗಾರಿಕೆ ಮಾಡುವ ರೈತರು ಆರ್ಥಿಕ ನಷ್ಟದಲಿದ್ದು, ಎಮ್ಮೆ ಹಾಲಿಗೆ ರೂ. 100 ಮತ್ತು ಆಕಳು ಹಾಲಿಗೆ 70 ಹೆಚ್ಚಿಸಬೇಕು, ರೈತರ ಸಾಲ ಮನ್ನಾ ಮಾಡಿ, ರೈತರನ್ನು ಸಾಲ ಋಣ ಮುಕ್ತರನ್ನಾಗಿ ಮಾಡಬೇಕು. ಟಿ.ಸಿ.(ವಿದ್ಯುತ ಪರಿವರ್ತಕ) ಗಳನ್ನು ಅಕ್ರಮ ಸಕ್ರಮ ಮಾಡಿ ರೈತರಿಗೆ ಅನುಕೂಲ ಮಾಡಿಕೊಡುವಂತೆ ಸರ್ಕಾರವನ್ನು ಒತ್ತಾಯಿಸಲು ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ತಾಲೂಕಾಧ್ಯಕ್ಷ ರಮೇಶ ಕಲ್ಹಾರ, ಜಿ.ಪಂ.ಮಾಜಿ ಸದಸ್ಯ ನಿಂಗಪ್ಪ ಪಕಾಂಡಿ, ಜಿಲ್ಲಾ ಕಾರ್ಯದರ್ಶಿ ಶ್ರೀಶೈಲ ಅಂಗಡಿ, ಕಲ್ಲನಗೌಡ ಪಾಟೀಲ, ಮಹಾದೇವ ಹೊಳ್ಕರ, ವಿಜಯ ನಾಯಿಕ, ಹನುಮಂತ ನಾಯಿಕ, ಮಾರುತಿ ಅರಭಾವಿ, ರಮೇಶ ಪಾಟೀಲ, ಲಕ್ಕಪ್ಪ ಜೋಡಟ್ಟಿ, ರಮೇಶ ಚೌಗಲಾ, ಅಜೀತ ಜಾಧವ, ಸಿದ್ರಾಮ ನಾಯಿಕ ಸೇರಿ ಅನೇಕ ರೈತರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 