ವಿಕಲಚೇತನರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
Demand for fulfillment of various demands of the disabled
ಗದಗ, ಜು.28: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವಿಕಲಚೇತನರ ಘಟಕವು ವಿಕಲಚೇತನರ ವಿವಿಧ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಪರಶುರಾಮ ಬೆಟಗೇರಿ ಮಾತನಾಡಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಮಾಸಾಶನವನ್ನು ವಿತರಿಸಬೇಕು. ಮಾಸಾಶನಕ್ಕೆ ಯಾವುದೇ ರೀತಿಯ ಆದಾಯ ಮಿತಿಯನ್ನು ವಿಧಿಸಬಾರದು ಎಂದು ಒತ್ತಾಯಿಸಿದರು.
ರಾಜ್ಯ ಸಾರಿಗೆ ಬಸ್ಗಳಲ್ಲಿ ವಿಕಲಚೇತನರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು. ಬಸ್ಗಳಲ್ಲಿ ವಿಕಲಚೇತನರಿಗೆ ಮೀಸಲಾದ ಆಸನಗಳಲ್ಲಿ ಇತರರು ಕುಳಿತಿದ್ದರೆ, ನಿರ್ವಾಹಕರು ಅವರಿಗೆ ಆಸನ ಒದಗಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಹುದ್ದೆಗಳ ನೇಮಕಾತಿಯಲ್ಲಿ ವಿಕಲಚೇತನರಿಗೆ ಆದ್ಯತೆ ನೀಡಬೇಕು. ಸರ್ಕಾರ ಮೀಸಲಿಟ್ಟಿರುವ ಶೇ.5ರಷ್ಟು ಮೀಸಲಾತಿಯನ್ನು ಸಮರ್ಕವಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ವಾಣಿಜ್ಯ ಮಳಿಗೆಗಳು ಹಾಗೂ ವಸತಿ ಯೋಜನೆಗಳಲ್ಲಿ ವಿಕಲಚೇತನರಿಗೆ ಆದ್ಯತೆ ನೀಡಬೇಕು. ಇತರ ರಾಜ್ಯಗಳ ಮಾದರಿಯಲ್ಲಿ ಶೇ.40ಕ್ಕಿಂತ ಹೆಚ್ಚು ಅಂಗವೈಕಲ್ಯ ಹೊಂದಿರುವವರಿಗೆ ಯಾಂತ್ರಚಾಲಿತ ವಾಹನಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಗದಗ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಲಿಫ್ಟ್ ನಿರ್ವಹಣೆಯಂತಹ ಹುದ್ದೆಗಳಲ್ಲಿ ವಿಕಲಚೇತನರನ್ನು ನೇಮಕ ಮಾಡಿಕೊಳ್ಳಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಜಿಲ್ಲಾಧಿಕಾರಿ ಕಚೇರಿಗಳ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕೋಟ್ರೇಶ್ ಹೊನ್ನಗುಡಿ, ಪಾಂಡುರಂಗ ಹೆಬ್ಬಾರಿ, ಮಂಜುನಾಥ ಜಾಲಗಾರ, ದುರ್ಗಪ್ಪ ಸಂಕನಕಲ್ಲ, ವೆಂಕಪ್ಪ ಸೂಳಿಕೇರಿ, ಖಾಜಾಹುಸೇನ್ ಖಾತರಕಿ, ಕೃಷ್ಣ ಜಾಧವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 