ಛಾಯಾಗ್ರಾಹಕರಿಗೆ ಸರ್ಕಾರದ ಸೌಲಭ್ಯ ಕಲ್ಪಿಸಲು ಆಗ್ರಹ
Demand for government facilities for photographers
ಲೋಕದರ್ಶನ ವರದಿ
ಸಿಂದಗಿ 25 : ಸಿಂದಗಿ ನಗರದ ಬಸವ ಮಂಟಪದಲ್ಲಿ ಫೋಟೋ ಮತ್ತು ವಿಡಿಯೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಹಾಗೂ ತರಬೇತಿ ಕಾರ್ಯಾಗಾರ ನಡೆಯಿತು. ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಮಾಜದ ಮಹತ್ವದ ಘಟನೆಗಳನ್ನು ದಾಖಲಿಸುವ ಛಾಯಾಗ್ರಾಹಕರು ಹಾಗೂ ವಿಡಿಯೋಗ್ರಾಫರ್ಗಳಿಗೆ ಸರ್ಕಾರ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಹೇಳಿದರು.
ನಿವೃತ್ತ ಪ್ರಾಧ್ಯಾಪಕ ಶಾಂತೂ ಹಿರೇಮಠ ಮಾತನಾಡಿ, ಮೊಬೈಲ್ ಬಳಕೆ ಹೆಚ್ಚಾದ ಹಿನ್ನೆಲೆಯಲ್ಲಿ ಛಾಯಾಗ್ರಹಣ ಕ್ಷೇತ್ರದ ಮೇಲಿನ ಆಸಕ್ತಿ ಕಡಿಮೆಯಾಗುತ್ತಿದೆ. ಆದರೆ ಸಮಾಜದ ನೆನಪುಗಳನ್ನು ದಾಖಲಿಸುವ ಛಾಯಾಗ್ರಾಹಕರ ಸೇವೆ ಅಮೂಲ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಛಾಯಾಗ್ರಾಹಕರನ್ನು ಸನ್ಮಾನಿಸಲಾಯಿತು. ಆದಿಶೇಷ ಸಂಸ್ಥಾನ ಹಿರೇಮಠದ ರಾಜಯೋಗಿ ವೀರರಾಜೇಂದ್ರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 