ಶಿಗ್ಗಾವಿ ಸಾರಿಗೆ ಘಟಕ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಶೀಘ್ರ ಪರಿಹಾರಕ್ಕೆ ಆಗ್ರಹ
Demand for immediate compensation for farmers who provided land for the construction of the Shiggaon
ಶಿಗ್ಗಾವಿ 07: ಪಟ್ಟಣ ಹೊರವಲಯದಲ್ಲಿ ಸಾರಿಗೆ ಘಟಕ ನಿರ್ಮಾಣಕ್ಕಾಗಿ ಭೂಮಿ ನೀಡಿದ ರೈತರಿಗೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜೀವಿಕ ಜೀವನ ವಿಮುಕ್ತಿ ಹಾಗೂ ಅತಂತ್ರ ಕಾರ್ಮಿಕರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಯಲ್ಲಪ್ಪ ಗೊಣೆಣ್ಣವರ ಅವರಿಗೆ ಮನವಿ ಸಲ್ಲಿಸಿದರು. ಶಿಗ್ಗಾವಿ ಸಾರಿಗೆ ಘಟಕ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ರೈತರಿಗೆ ಸರ್ಕಾರ ಕೂಡಲೇ ಪರಿಹಾರ ಒದಗಿಸಬೇಕು ಎಂದು ಸಂಘದ ಮುಖಂಡರು ಒತ್ತಾಯಿಸಿದರು. ಮನವಿಯಲ್ಲಿ, ಗದಿಗೆಪ್ಪ ಓಲಿ ಎಂಬ ರೈತರ ಆರ್.ಎಸ್. ನಂ. 432ರಲ್ಲಿರುವ 1 ಎಕರೆ ಜಮೀನು ಸಾರಿಗೆ ಘಟಕದ ವ್ಯಾಪ್ತಿಗೆ ಒಳಪಟ್ಟಿದ್ದು, ಆ ಜಮೀನನ್ನೇ ಅವಲಂಬಿಸಿ ಜೀವನ ನಡೆಸುತ್ತಿದ್ದ ಬಡ ರೈತನಿಗೆ ಇದುವರೆಗೆ ಯಾವುದೇ ಪರಿಹಾರ ನೀಡಲಾಗಿಲ್ಲ ಎಂದು ತಿಳಿಸಲಾಗಿದೆ. ರೈತನಿಗೆ ನ್ಯಾಯಯುತ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ಎಚ್ಚರಿಸಿದರು. ಈ ಸಂದರ್ಭದಲ್ಲಿ ದಲಿತ ಮುಖಂಡ ಅಶೋಕ ಕಾಳೆ, ಸುರೇಶ್ ಹರಿಜನ, ಶಿವಪ್ಪ ಓಲಿ, ಗದಿಗೆಪ್ಪ ಓಲಿ, ಶೋಭಾ ಚಂದಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 