56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ತಕ್ಷಣ ಅಧಿಸೂಚನೆ ಹೊರಡಿಸಲು ಒತ್ತಾಯ

56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ ತಕ್ಷಣ ಅಧಿಸೂಚನೆ ಹೊರಡಿಸಲು ಒತ್ತಾಯ Demand for immediate notification for recruitment of 56,432 government posts

ಲೋಕದರ್ಶನ ವರದಿ 

ಧಾರವಾಡ 17 : ರಾಜ್ಯಸರ್ಕಾರ ಹೇಳಿದಂತೆ ಈ ಕೂಡಲೇ 56,432 ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಬೇಕು. ಉದ್ಯೋಗಾಕಾಂಕ್ಷಿಗಳ ಸತತ ಹೋರಾಟಗಳ ಫಲವಾಗಿ ಕಳೆದ ಡಿಸೆಂಬರ್ ಚಳಿಗಾಲದ ಅಧಿವೇಶನದಲ್ಲಿ 56,432 ಹುದ್ದೆಗಳಿಗೆ ಅನುಮೋದನೆ ನೀಡಿದ್ದು ಆರು ತಿಂಗಳುಗಳಾದರೂ ಕೆಲವೇ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ನೆಪಗಳನ್ನು ನೀಡುತ್ತಾ ನೇಮಕಾತಿ ಪ್ರಕ್ರಿಯೆಯನ್ನು ಮುಂದೂಡಲಾಗುತ್ತಿದೆ.

ಇತ್ತೀಚೆಗೆ ಪೊಲೀಸ್ ನೇಮಕಾತಿಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ದುಬಾರಿ ಪರೀಕ್ಷಾ ಶುಲ್ಕವನ್ನು 750 ನಿಗದಿಗೊಳಿಸಲಾಗಿದೆ. ಆದ್ದರಿಂದ ಕೂಡಲೇ 56,432 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಬೇಕು, ಪೊಲೀಸ್ ನೇಮಕಾತಿ ಅರ್ಜಿ ಶುಲ್ಕವನ್ನು ಕಡಿತಗೊಳಿಸಬೇಕು ಹಾಗೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಿ ಪಾರದರ್ಶಕ ನೇಮಕಾತಿಗೆ ಆಗ್ರಹಿಸಿ ಇದೆ ಜೂನ್ 23 ರಂದು ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.