ವಿಕಲಚೇತನರ ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಆಗ್ರಹ
Demand for immediate resolution of issues faced by persons with disabilities
ಲೋಕದರ್ಶನ ವರದಿ
ಬೆಳಗಾವಿ 06: ಜಿಲ್ಲೆಯ ವಿಕಲಚೇತನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಿ, ಸರ್ಕಾರದ ವಿವಿಧ ಯೋಜನೆಗಳ ಅನುದಾನವನ್ನು ಸಮಯಕ್ಕೆ ಸರಿಯಾಗಿ ಫಲಾನುಭವಿಗಳಿಗೆ ತಲುಪಿಸುವಂತೆ ಕರ್ನಾಟಕ ರಾಜ್ಯ ರೈತಪರ ಹೋರಾಟ ಸಂಘದ ಬೆಳಗಾವಿ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸಂಘದ ಪದಾಧಿಕಾರಿಗಳು ಜಿಲ್ಲಾ ಅಧ್ಯಕ್ಷ ಕೃಷ್ಣ ಹಿತ್ತಲಮನಿ ನೇತೃತ್ವದಲ್ಲಿ ಮನವಿ ಸಲ್ಲಿಸಿ, ವಿಕಲಚೇತನರಿಗೆ ನೀಡಲಾಗುತ್ತಿರುವ ಮಾಸಾಶನವನ್ನು ಪ್ರತಿ ತಿಂಗಳು ನಿಯಮಿತವಾಗಿ ವಿತರಿಸಬೇಕು ಎಂದು ಆಗ್ರಹಿಸಿದರು.
ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು ಕನಿಷ್ಠ ?2,500ಕ್ಕೆ ಹೆಚ್ಚಿಸಬೇಕು. ಅಲ್ಲದೆ, ಅಂಗವೈಕಲ್ಯದ ಪ್ರಮಾಣಕ್ಕೆ ಅನುಗುಣವಾಗಿ ಹಂತ ಹಂತವಾಗಿ ಅನುದಾನ ಹೆಚ್ಚಿಸುವ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಜಿಲ್ಲೆಯ ಕೆಲವು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಿಕಲಚೇತನರಿಗಾಗಿ ಮೀಸಲಿರುವ ಶೇ.5ರ ಅನುದಾನ ಅರ್ಹ ಫಲಾನುಭವಿಗಳಿಗೆ ಸಮರ್ಕವಾಗಿ ತಲುಪುತ್ತಿಲ್ಲ ಎಂಬ ಆರೋಪವೂ ಮನವಿಯಲ್ಲಿ ಮಾಡಲಾಗಿದೆ. ಈ ಕುರಿತು ಜಿಲ್ಲಾಡಳಿತ ಸಮಗ್ರ ತನಿಖೆ ನಡೆಸಿ, ಅನುದಾನವನ್ನು ಪಾರದರ್ಶಕವಾಗಿ ಅರ್ಹರಿಗೆ ತಲುಪಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಂಘ ಆಗ್ರಹಿಸಿದೆ.
ವಿಕಲಚೇತನರ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ತ್ವರಿತ ಹಾಗೂ ನ್ಯಾಯಸಮ್ಮತ ಕ್ರಮ ಕೈಗೊಳ್ಳಲಿದೆ ಎಂಬ ವಿಶ್ವಾಸವನ್ನು ಸಂಘದ ಪದಾಧಿಕಾರಿಗಳು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 