ಮಹಿಳೆಯರಿಗೆ ಹೆಚ್ಚಿನ ಸಚಿವ ಸ್ಥಾನ ನೀಡಲು ಆಗ್ರಹ
Demand for more ministerial posts for women
ಲೋಕದರ್ಶನ ವರದಿ
ಮಹಾಲಿಂಗಪುರ 19: ರಾಜ್ಯದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹೆಚ್ಚಿನ ಕ್ಯಾಬಿನೆಟ್ ಸಚಿವ ಸ್ಥಾನಗಳನ್ನು ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಉತ್ತೇಜನ ನೀಡಬೇಕು ಎಂದು ಚಿಮ್ಮಡ ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ನ್ಯಾಯವಾದಿ ಮೇಘಾ ಅರುಣಕುಮಾರ ಗಾಣಿಗೇರ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮಹಿಳೆಯರು ಇಂದು ರಾಜಕೀಯ, ಶಿಕ್ಷಣ, ಆಡಳಿತ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಆದ್ದರಿಂದ ಆಡಳಿತದ ಉನ್ನತ ಹಂತದಲ್ಲಿಯೂ ಅವರಿಗೆ ಸೂಕ್ತ ಪ್ರತಿನಿಧಿತ್ವ ನೀಡುವುದು ಅಗತ್ಯವಾಗಿದೆ ಎಂದು ಹೇಳಿದರು.
ರಾಜ್ಯದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದ್ದು, ಸಚಿವ ಸಂಪುಟದಲ್ಲಿ ಹೆಚ್ಚಿನ ಮಹಿಳೆಯರಿಗೆ ಅವಕಾಶ ಕಲ್ಪಿಸುವುದರಿಂದ ಜನಪರ ಆಡಳಿತಕ್ಕೆ ಮತ್ತಷ್ಟು ಬಲ ಸಿಗಲಿದೆ. ಮಹಿಳೆಯರಿಗೆ ರಾಜಕೀಯವಾಗಿ ಹೆಚ್ಚಿನ ಅವಕಾಶಗಳನ್ನು ಒದಗಿಸುವ ಮೂಲಕ ಅವರ ನಾಯಕತ್ವ ಗುಣಗಳನ್ನು ಬೆಳೆಸಲು ಸರ್ಕಾರ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.
ಮಹಿಳಾ ಪ್ರತಿನಿಧಿತ್ವವನ್ನು ಹೆಚ್ಚಿಸುವುದು ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕು ಎಂದು ಮೇಘಾ ಅರುಣಕುಮಾರ ಗಾಣಿಗೇರ ಮನವಿ ಮಾಡಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 