ರಾಯಬಾಗದ ಬಾಕಿ ಕೆಲಸಗಳಿಗೆ ಅಧಿವೇಶನದಲ್ಲಿ ಒತ್ತಾಯ: ಶಾಸಕ ಐಹೊಳೆ
Demand for pending works of the Royal Palace in the session: MLA Aihole
ಚಿಕ್ಕೋಡಿ, 20 : ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ರಾಯಬಾಗ ಕ್ಷೇತ್ರದ ನೆನೆಗುದಿಗೆ ಬಿದ್ದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಸ್ತಾಪ ಮಾಡಲಾಗುತ್ತದೆ ಎಂದು ಶಾಸಕ ದುರ್ಯೋಧನ ಐಹೊಳೆ ತಿಳಿಸಿದ್ದಾರೆ. ತಾಲೂಕಿನ ಜೈನಾಪೂರ ಮತ್ತು ಹತ್ತರವಾಟ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಅಭಿವೃದ್ಧಿ ಕಾಮಗಾರಿಗಳ ಕುರಿತುರಾಯಬಾಗ ಕ್ಷೇತ್ರದ ಬಾಕಿ ಉಳಿದಿರುವ ಯೋಜನೆಗಳನ್ನು ಅಧಿವೇಶನದಲ್ಲಿ ಗಟ್ಟಿ ಧ್ವನಿಯಲ್ಲಿ ಒತ್ತಾಯಿಸಿ, ಅವುಗಳಿಗೆ ಅಗತ್ಯ ಅನುದಾನ ಮತ್ತು ಅನುಮೋದನೆ ತಂದು ಕೊಡಲಾಗುತ್ತದೆ” ಎಂದು ಭರವಸೆ ನೀಡಿದರು.
ರಾಯಬಾಗ ಕ್ಷೇತ್ರ ವ್ಯಾಪ್ತಿಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಪರಿಶಿಷ್ಟ ಕಾಲೋನಿಯಲ್ಲಿ ಕುಡಿಯುವ ನೀರು ಸರಬರಾಜು ಹಾಗೂ ಸ್ಮಶಾನಕ್ಕೆ ರಸ್ತೆ ನಿರ್ಮಾಣಕ್ಕಾಗಿ ?30 ಲಕ್ಷ ಅನುದಾನ ಮಂಜೂರಾಗಿದೆ ಎಂದು ಹೇಳಿದರು.ಅದೇ ರೀತಿ ಜೈನಾಪೂರಹಿಹತ್ತರವಾಟ ಕೂಡು ರಸ್ತೆಗೆ ?40 ಲಕ್ಷ ಅನುದಾನ ಹಾಗೂ ಮಜಲಟ್ಟಿ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ?20 ಲಕ್ಷ ಅನುದಾನ ಮಂಜೂರಾಗಿದೆ ಎಂದು ಅವರು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಹೆಸ್ಕಾಂ ಮಾಜಿ ನಿರ್ದೇಶಕ ಮಹೇಶ್ ಭಾತೆ, ವಿಜಯ ಕೊಠಿವಾಲೆ, ರಾಜು ಹರಗನ್ನವರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 