ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ ಖಾಯಂ ಉದ್ಯೋಗಕ್ಕೆ ಆಗ್ರಹ
Demand for permanent employment for Tungabhadra irrigation workers
ರಾಯಚೂರು 09 : ತುಂಗಭದ್ರಾ ನೀರಾವರಿ ಯೋಜನೆಯಲ್ಲಿ ಕಳೆದ 25ಹಿ30 ವರ್ಷಗಳಿಂದ ಖಾಯಂ ಸ್ವರೂಪದ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸಿ, ಗುತ್ತಿಗೆ ಪದ್ಧತಿ ರದ್ದುಪಡಿಸಿ ನೇರ ವೇತನ ಪಾವತಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ (ಎಐಟಿಸಿಟಿಯು) ಆಗ್ರಹಿಸಿದೆ.
ಈ ಕುರಿತು ಶಾಸಕರಾದ ಬಸನಗೌಡ ದದ್ದಲ್, ಶಿವರಾಜ್ ಪಾಟೀಲ್ ಹಾಗೂ ಮಾಜಿ ಸಚಿವರು ಮತ್ತು ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್. ಬೋಸರಾಜು, ಎಂ. ವಸಂತಕುಮಾರ್ ಅವರಿಗೆ ಸಂಘದ ಮುಖಂಡರು ಮನವಿ ಸಲ್ಲಿಸಿದರು.
ತುಂಗಭದ್ರಾ ಜಲಾಶಯದ ಮೂಲಕ ಕೊಪ್ಪಳ, ವಿಜಯನಗರ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಲಕ್ಷಾಂತರ ಎಕರೆ ಕೃಷಿಭೂಮಿಗೆ ನೀರು ಹರಿಸುವ ಮಹತ್ವದ ಕಾರ್ಯದಲ್ಲಿ ಕಾರ್ಮಿಕರು ವರ್ಷಗಳಿಂದ ಅಪಾಯಕಾರಿ ಪರಿಸ್ಥಿತಿಗಳಲ್ಲಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಉದ್ಯೋಗ ಭದ್ರತೆ ಇಲ್ಲದೆ ಗುತ್ತಿಗೆ ಪದ್ಧತಿಯಡಿ ಕೆಲಸ ಮುಂದುವರಿಸಿರುವುದು ಅನ್ಯಾಯ ಎಂದು ಸಂಘ ಆರೋಪಿಸಿದೆ.
25ಹಿ30 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸುವುದು, ಗುತ್ತಿಗೆ ಪದ್ಧತಿ ರದ್ದುಪಡಿಸಿ ನೇರ ವೇತನ ಪಾವತಿ ಜಾರಿಗೊಳಿಸುವುದು, ನಿರಂತರ ಉದ್ಯೋಗ ಭದ್ರತೆ ನೀಡುವುದು ಹಾಗೂ ಬಾಕಿ ವೇತನ, ಭವಿಷ್ಯ ನಿಧಿ, ಇಎಸ್‌ಐ, ಕನಿಷ್ಠ ವೇತನದ ಬಾಕಿ, ತುಟ್ಟಿ ಭತ್ಯೆ ಸೇರಿದಂತೆ ಕಾನೂನುಬದ್ಧ ಸೌಲಭ್ಯಗಳನ್ನು ಪಾವತಿಸಬೇಕು ಎಂದು ಒತ್ತಾಯಿಸಲಾಯಿತು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 