ಜಿಲ್ಲಾಸ್ಪತ್ರೆಯಲ್ಲಿ ಸಮರ​‍್ಕ ಚಿಕಿತ್ಸೆ ಕಲ್ಪಿಸಲು ಒತ್ತಾಯ; ಜಿಲ್ಲಾಧಿಕಾರಿಗೆ ಮನವಿ

ಜಿಲ್ಲಾಸ್ಪತ್ರೆಯಲ್ಲಿ ಸಮರ​‍್ಕ ಚಿಕಿತ್ಸೆ ಕಲ್ಪಿಸಲು ಒತ್ತಾಯ; ಜಿಲ್ಲಾಧಿಕಾರಿಗೆ ಮನವಿ  Demand for proper treatment at the district hospital; memorandum submitted to the Deputy Commissione

ಲೋಕದರ್ಶನ ವರದಿ  

ಗದಗ, ಆ.4: ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ​‍್ಕ ಚಿಕಿತ್ಸೆ ಹಾಗೂ ಅಗತ್ಯ ಓಷಧೋಪಚಾರ ಒದಗಿಸಬೇಕು. ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಕಡಿವಾಣ ಹಾಕಿ, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವಂತೆ ಗದಗ ಜಿಲ್ಲಾ ಸ್ಲಂ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.  

ಸಮಿತಿಯ ಅಧ್ಯಕ್ಷ ಇಮ್ತಿಯಾಜ್ ಆರ್‌. ಮಾನ್ವಿ ಮಾತನಾಡಿ, ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ಜನರು, ಕೂಲಿ ಕಾರ್ಮಿಕರು ಮತ್ತು ಬಿಪಿಎಲ್ ಕುಟುಂಬಗಳು ಆರ್ಥಿಕ ಕಾರಣಗಳಿಂದ ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸುತ್ತಾರೆ. ಆದರೆ ಜಿಲ್ಲಾಸ್ಪತ್ರೆಯಲ್ಲಿ ಕೆಲ ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ರೋಗಿಗಳು ಸಮರ​‍್ಕ ಚಿಕಿತ್ಸೆ ಪಡೆಯಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.  

ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬವಾಗುತ್ತಿದೆ. ಆಸ್ಪತ್ರೆಯಲ್ಲಿ ಲಭ್ಯವಿರಬೇಕಾದ ಓಷಧ, ಇಂಜೆಕ್ಷನ್ ಹಾಗೂ ಇತರೆ ವೈದ್ಯಕೀಯ ಸಾಮಗ್ರಿಗಳನ್ನು ಹೊರಗಿನಿಂದ ಖರೀದಿಸುವಂತೆ ಸೂಚಿಸಲಾಗುತ್ತಿದೆ. ಇದರಿಂದ ಬಡ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಉಂಟಾಗುತ್ತಿದೆ ಎಂದು ದೂರಿದರು.  

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡವರು ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಚಿಕಿತ್ಸೆ ಮತ್ತು ಓಷಧ ಸೌಲಭ್ಯ ದೊರೆಯಬೇಕು ಎಂಬ ಸರ್ಕಾರದ ಉದ್ದೇಶ ಸಮರ​‍್ಕವಾಗಿ ಜಾರಿಯಾಗಬೇಕು. ಜಿಲ್ಲಾಸ್ಪತ್ರೆಯಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ವೈದ್ಯರು ಮತ್ತು ಸಿಬ್ಬಂದಿ ಮಾನವೀಯತೆ ಹಾಗೂ ಜವಾಬ್ದಾರಿಯಿಂದ ಸೇವೆ ಸಲ್ಲಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  

ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಪ್ರತ್ಯೇಕ ಮನವಿ ಸಲ್ಲಿಸಲಾಗಿದೆ. ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಜಿಲ್ಲಾ ಸ್ಲಂ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.  

ಮನವಿ ಸಲ್ಲಿಸುವ ಸಂದರ್ಭದಲ್ಲಿ ಎಂ.ಬಿ. ನದಾಫ್, ಪರವೀನ್ಬಾನು ಹವಾಲ್ದಾರ್, ಪುಷ್ಪಾ ಬಿಜಾಪುರ, ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೌಲಾಸಾಬ್ ಗಚ್ಚಿ, ಮಕ್ತೂಮಸಾಬ್ ಮುಲ್ಲಾ, ಖಾಜಾಸಾಬ್ ಬಳ್ಳಾರಿ, ನಜಮುನಿಸಾ ಮುರುಗೋಡ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.