ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಮರು ಸೇರೆ​‍್ಡಗೆ ಆಗ್ರಹ: ಬಿಜೆಪಿಯಿಂದ ಮನವಿ

ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಮರು ಸೇರೆ​‍್ಡಗೆ ಆಗ್ರಹ: ಬಿಜೆಪಿಯಿಂದ ಮನವಿ  Demand for re-inclusion in the list of drought-hit taluks: Representation by BJP


ಬೈಲಹೊಂಗಲ, 29: ಬೈಲಹೊಂಗಲ, ಕಿತ್ತೂರು, ಸವದತ್ತಿ, ಗೋಕಾಕ, ಯರಗಟ್ಟಿ ಹಾಗೂ ರಾಮದುರ್ಗ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಶನಿವಾರ ಬೈಲಹೊಂಗಲ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.  

ಈ ಭಾಗದ ಬಹುತೇಕ ಗ್ರಾಮಗಳಲ್ಲಿ ರೈತರ ಪ್ರಮುಖ ಜೀವನಾಧಾರ ಕೃಷಿಯಾಗಿದೆ. ಮಳೆ ಕೊರತೆ, ಅಸಮರ​‍್ಕ ಮಳೆ ಹಂಚಿಕೆ ಹಾಗೂ ಬೆಳೆಗಳಿಗೆ ಅಗತ್ಯವಿರುವ ಸಂದರ್ಭದಲ್ಲಿ ಮಳೆ ಬಾರದಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಕೃಷಿ ಚಟುವಟಿಕೆಗಳು ತೀವ್ರವಾಗಿ ಹದಗೆಟ್ಟಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.  

ಇಂತಹ ಪರಿಸ್ಥಿತಿಯಲ್ಲಿ ಸಂಬಂಧಿಸಿದ ತಾಲ್ಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದು ರೈತರಿಗೆ ಮಾಡಿರುವ ಅನ್ಯಾಯವಾಗಿದೆ. ಇದರಿಂದ ರೈತರಿಗೆ ದೊರೆಯಬೇಕಾದ ಬರ ಪರಿಹಾರ, ಬೆಳೆ ನಷ್ಟ ಪರಿಹಾರ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗುವ ಆತಂಕ ಎದುರಾಗಿದೆ ಎಂದು ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ ಹೇಳಿದರು.  

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ ಮಾತನಾಡಿ, ಅಧಿಕಾರಿಗಳು ವಾಸ್ತವ ಪರಿಸ್ಥಿತಿಯನ್ನು ಸಮಗ್ರವಾಗಿ ಪರೀಶೀಲಿಸಿ, ಅಗತ್ಯವಿದ್ದಲ್ಲಿ ಸ್ಥಳ ಪರೀಶೀಲನೆ ನಡೆಸಿ ರೈತರ ಸಂಕಷ್ಟವನ್ನು ಸರ್ಕಾರದ ಗಮನಕ್ಕೆ ತರಬೇಕು. ರೈತರ ಹಿತದೃಷ್ಟಿಯಿಂದ ಬೈಲಹೊಂಗಲ, ಕಿತ್ತೂರು, ಸವದತ್ತಿ, ಗೋಕಾಕ, ಯರಗಟ್ಟಿ ಹಾಗೂ ರಾಮದುರ್ಗ ತಾಲ್ಲೂಕುಗಳನ್ನು ತಕ್ಷಣವೇ ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಮರು ಸೇರೆ​‍್ಡಗೊಳಿಸಲು ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು.  

ರೈತರ ನ್ಯಾಯಯುತ ಬೇಡಿಕೆಯನ್ನು ಕೂಡಲೇ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರೈತರ ಪರವಾಗಿ ಉಗ್ರ ಹೋರಾಟ ಹಾಗೂ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.  

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಸುಭಾಷ್ ತುರಮರಿ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಹಡಪದ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ಮುಖಂಡರಾದ ಆನಂದ ಬೂದಿಹಾಳ, ಅಶೋಕ ಇಂಗಳಗಿ, ಆನಂದ ಏಣಗಿ, ರಮೇಶ್ ಕಮ್ಮಾರ, ಪ್ರವೀಣ ಶಿಂಗಾರಿ, ರಾಜು ಗೂಡಿಮನಿ, ರಮೇಶ್ ಹುರುಳಿ, ಶ್ರೀಕಾಂತ ಬೂದಿಹಾಳ, ಶಿವಾನಂದ ಇಂಚಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.