ಉರ್ದು ಶಿಕ್ಷಕರ ನೇಮಕಾತಿಗೆ ಆಗ್ರಹ: ಸಚಿವರಿಗೆ ಮನವಿ

ಉರ್ದು ಶಿಕ್ಷಕರ ನೇಮಕಾತಿಗೆ ಆಗ್ರಹ: ಸಚಿವರಿಗೆ ಮನವಿ  Demand for recruitment of Urdu teachers: Appeal to the Minister

ಲೋಕದರ್ಶನ ವರದಿ 

  ಕೊಪ್ಪಳ, ಆ.18: ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿರುವ 15,000 ಶಿಕ್ಷಕರ ನೇಮಕಾತಿ ಆದೇಶದಲ್ಲಿ ಉರ್ದು ಮಾಧ್ಯಮ ಶಾಲೆಗಳ ಶಿಕ್ಷಕರ ಹುದ್ದೆಗಳನ್ನು ಕಡೆಗಣಿಸಿರುವುದನ್ನು ಖಂಡಿಸಿ, ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರ ಮೂಲಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರ​‍್ಪ ಅವರಿಗೆ ಮನವಿ ಸಲ್ಲಿಸಿದರು.  

ಶಾಲಾ-ಕಾಲೇಜುಗಳ ಹಿತರಕ್ಷಣಾ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ತಕ್ಷಣವೇ ಪೂರಕ ಆದೇಶ (ಅಠಡಿರಜಟಿಜಣಟ) ಹೊರಡಿಸಿ ಉರ್ದು ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಲಾಯಿತು.  

ರಾಜ್ಯದ ನೂರಾರು ಉರ್ದು ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ಬಡ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣದ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು, ಹಲವು ಶಾಲೆಗಳು ಮುಚ್ಚುವ ಹಂತ ತಲುಪಿವೆ. ಈ ಹಿನ್ನೆಲೆಯಲ್ಲಿ ಉರ್ದು ಮಾಧ್ಯಮದ ಶಿಕ್ಷಕರ ಹುದ್ದೆಗಳನ್ನು ನೇಮಕಾತಿ ಪ್ರಕ್ರಿಯೆಗೆ ಸೇರಿಸಿ, ವಿಶೇಷ ಅಧಿಸೂಚನೆ ಹೊರಡಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.  

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಎಸ್‌.ಎ. ಗಫಾರ್, ಗೌರವಾಧ್ಯಕ್ಷ ಬಸವರಾಜ ಶೀಲವಂತರ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಉರ್ದು ಡಿಇಡಿ ಪದವೀಧರ ಆಕಾಂಕ್ಷಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.