ಹದಗೆಟ್ಟ ರಸ್ತೆ ದುರಸ್ತಿಗೆ ಆಗ್ರಹ
Demand for repair of dilapidated road
ಲೋಕದರ್ಶನ ವರದಿ
ದಾಂಡೇಲಿ 11 : ಹಳೇ ದಾಂಡೇಲಿಯಿಂದ ಪಟೇಲ ನಗರಕ್ಕೆ ಹೋಗುವ ಮುಖ್ಯ ರಸ್ತೆ ಕಳೆದ 5 ವರ್ಷಗಳಿಂದ ಹದಗೆಟ್ಟಿದ್ದು ಜನ ವಾಹನ ಸಂಚಾರಕ್ಕೆ ಅಡೆತಡೆಯಾಗಿರುವದನ್ನು ಸ್ಥಳೀಯರು ಸೋಮವಾರ ರಸ್ತಾ ರೋಕೊ ನಡೆಸಿ, ಪ್ರತಿಭಟಿಸಿದರು. ವಿವಿಧ ಯೋಜನೆಗಾಗಿ ರಸ್ತೆ ಗಳನ್ನು ಅಗೆದು ಅವುಗಳನ್ನು ದುರಸ್ತಿ ಮಾಡದೆ ಹಾಗೆಯೆ ಬಿಟ್ಟು ಹೋಗಿರುವದರಿಂದ ರಸ್ತೆ ತುಂಬಾ ಬ್ರಹತ್ ಗುಂಡಿಗಳ ನಿರ್ಮಾಣವಾಗಿದೆ. ಕಳೆದ ನಾಲಕೈದು ವರ್ಷಗಳಿಂದ ಜನ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಹೊಸದಾಗಿ ರಸ್ತೆ ನಿರ್ಮಿಸಿ ಕೊಡಬೇಕೆಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ನಗರಸಭೆ ಪೌರಾಯುಕ್ತ ವಿವೇಕ್ ಬನ್ನೆ ಭೇಟಿ ನೀಡಿ ಈಗಾಗಲೇ ರಸ್ತೆ ನಿರ್ಮಾಣಕ್ಕಾಗಿ 81 ಲಕ್ಷ ರೂಪಾಯಿ ವೆಚ್ಚದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮುಂದಿನ ದಿನಗಳಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ತಾತ್ಕಾಲಿಕವಾಗಿ ರಸ್ತೆ ದುರಸ್ತಿ ಮಾಡುವದಾಗಿ ಹೇಳಿದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 