ಮಾನ್ಯ ಪಾಟೀಲ್ ಕೊಲೆಗಡುಕರಿಗೆ ಉಗ್ರ ಶಿಕ್ಷೆಗೆ ಗುರುಪಡಿಸಲು ಒತ್ತಾಯ
Demand for severe punishment for the murderers of Honorable Patil
ಗಂಗಾವತಿ 30 : ಹುಬ್ಬಳ್ಳಿಯ ಇನಾಮ ವೀರಾಪುರ ಗ್ರಾಮದ ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಮಾನ್ಯ ಪಾಟೀಲ್ ಎನ್ನುವ ಯುವತಿಯನ್ನು ಆಕೆಯ ಕುಟುಂಬಸ್ಥರೆ ಕೊಲೆ ಮಾಡಿದ್ದು ನಾಗರೀಕ ಸಮಾಜ ತಲೆತಗ್ಗಿಸುವ ಸಂಗತಿಯಾಗಿದ್ದು, ಕೂಡಲೆ ಕೊಲೆಗೆಡುಕರನ್ನು ಉಗ್ರ ಶಿಕ್ಷೆಗೆ ಗುರಿಪಡಿಸಬೇಕೆಂದು ಅಖಿಲ ಭಾರತ ಮಾದಿಗ ದಂಡೋರಾ ಗಂಗವತಿ ತಾಲೂಕಾ ಸಮಿತಿ ಗಂಗವತಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ದಲಿತ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು, ಯುವಕ ವಿವೇಕಾನಂದ ಇವರಿಗೆ ಸರಕಾರಿ ಉದ್ಯೋಗ ನೀಡಬೇಕು, ನ್ಯಾಯಯುತ ಪರಿಹಾರ ಸರಕಾರ ನೀಡಬೇಕು, ಕೊಲೆಗೆಡುಕು ಪ್ರಕಾಶ್ ಪಾಟೀಲ್ ಇತರರಿಗೆ ಕಠಿಣ ಶಿಕ್ಷೆ ನೀಡಬೇಕು, ರಾಜ್ಯದಾದ್ಯಂತ ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕೆಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಕನಕಪ್ಪ ದೊಡ್ಡಮನಿ, ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಶಿವಪ್ಪ ಸಿದ್ದಾಪುರ, ಪದಾಧಿಕಾರಿಗಳಾದ ಗುಂಡಪ್ಪ ನೀಲೋಗಲ್, ಯಮನೂರ್ಪ ಗೋನಾಳ, ರಮೇಶ್ ಢಣಾಪುರ ಹಾಗು ಯಮನೂರ್ಪ ಚುಕ್ಕಾಡಿ ಇತರರಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 