ಫಸಲ್ ಬಿಮಾ ಸೇರಿ ರೈತರ ಸಮಸ್ಯೆ ಪರಿಹಾರಕ್ಕೆ ಆಗ್ರಹ
Demand for solutions to farmers' problems, including crop insurance
ತಾಳಿಕೋಟಿ: ಫಸಲ್ ಭೀಮಾ ಸಮರ್ಕ ಅನುಷ್ಠಾನ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕ ಘಟಕದ ವತಿಯಿಂದ ಮೂಕಿಹಾಳ ಗ್ರಾಮದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹಾಗೂ ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ನೇತೃತ್ವದಲ್ಲಿ ಮೂಕಿಹಾಳ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನೂರಾರು ರೈತರು ಲಾಡ್ಲೆ ಮಶಾಖ್ ದರ್ಗಾದವರೆಗೆ ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ನಂತರ ದರ್ಗಾದ ಆವರಣದಲ್ಲಿ ಹಮ್ಮಿಕೊಂಡ ರೈತರ ಪ್ರತಿಭಟನೆ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ್ ನಡಹಳ್ಳಿ, ಜಿಲ್ಲಾ ಅಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡಿ ಮೂಕಿಹಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳು ಹಳ್ಳಿಗಳ ರೈತರಿಗೆ ಫಸಲ್ ಭಿಮಾ ಯೋಜನೆಯ ಬೆಳೆ ವಿಮಾ ಪರಿಹಾರ ಸಿಕ್ಕಿಲ್ಲ ಅದರಲ್ಲಿಯೂ 2025-26ನೇ ಸಾಲಿನ ಫಸಲ್ ಭಿಮಾ ಯೋಜನೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಇದರಿಂದ ರೈತರಿಗೆ ಸಾಕಷ್ಟು ನಷ್ಟವಾಗಿದೆ ಅಧಿಕಾರಿಗಳು ಈ ಕುರಿತು ಸ್ಪಷ್ಟವಾದ ಯಾವುದೇ ಮಾಹಿತಿ ನೀಡುತ್ತಿಲ್ಲ ಇದರ ಕುರಿತು ಪಾರದರ್ಶಕವಾಗಿ ತನಿಖೆ ಮಾಡಬೇಕೆಂದು ಆಗ್ರಸಿದರು.
ಈ ಪಂಚಾಯತಿ ವ್ಯಾಪ್ತಿಯಲ್ಲಿಯ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ದೊಡ್ಡ ಸಮಸ್ಯೆ ಇದೆ ಅಲ್ಲಿನ ಗ್ರಾಮಸ್ಥರು ಅಶುದ್ಧ ನೀರು ಸೇವಿಸಿ ರೋಗ ಗ್ರಸ್ತರಾಗುತ್ತಿದ್ದಾರೆ. ಈ ಗಂಭೀರ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಸಮರ್ಕವಾಗಿ ಕಾರ್ಯರೂಪಕ್ಕೆ ತರಬೇಕು. ಮೂಕಿಹಾಳ ಗ್ರಾ.ಪಂ.ದಲ್ಲಿ ಅಧಿಕಾರಿಗಳು ಪ್ರತಿ ಕೆಲಸಕ್ಕೂ ಬೇಡಿಕೆ ಇಡುತ್ತಾರೆ ಎಂದು ಆರೋಪಿಸಿದ ರೈತ ಮುಖಂಡರು ಮೇಲಾಧಿಕಾರಿಗಳು ಇದನ್ನು ನಿಯಂತ್ರಿಸಬೇಕು. ಇದರ ಜೊತೆಗೆ ರೈತರ ಜಮೀನುಗಳಿಗೆ ಹೋಗಲು ದಾರಿ, ಸಮರ್ಕ ವಿದ್ಯುತ್ ಪೂರೈಕೆ ಹೀಗೆ ರೈತರ ಹಲವಾರು ಗಂಭೀರ ಸಮಸ್ಯೆಗಳಿವೆ ಅವುಗಳನ್ನು ನಿಗದಿತ ಸಮಯದಲ್ಲಿ ಪರಿಹರಿಸದೆ ಹೋದರೆ ಇದಕ್ಕಿಂತಲೂ ಉಗ್ರವಾದ ಹೋರಾಟವನ್ನು ನಡೆಸಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 