ಸ್ಲಂ ನಿವಾಸಿಗಳ ಸಮಸ್ಯೆಗಳಿಗೆ ಪರಿಹಾರಕ್ಕೆ ಆಗ್ರಹ: ನಗರಸಭೆ ಮುಂದೆ ಪ್ರತಿಭಟನೆಗೆ ಕರೆ
Demand for solutions to slum dwellers' issues: Call for protest in front of the City Municipal Counc
ಗದಗ, ಆ. 2: ಗದಗ-ಬೆಟಗೇರಿ ನಗರದ ಸ್ಲಂ ಪ್ರದೇಶಗಳ ಅಭಿವೃದ್ಧಿ ಹಾಗೂ ನಿವಾಸಿಗಳ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಗದಗ ಜಿಲ್ಲಾ ಸ್ಲಂ ಸಮಿತಿಯು ಶೀಘ್ರದಲ್ಲೇ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಸಮಿತಿಯ ಅಧ್ಯಕ್ಷ ಇಮ್ತಿಯಾಜ್ ಆರ್. ಮಾನ್ವಿ ತಿಳಿಸಿದ್ದಾರೆ.
ನಗರಸಭೆ ಉದ್ಯಾನವನದಲ್ಲಿ ನಡೆದ ಸ್ಲಂ ನಿವಾಸಿಗಳು ಹಾಗೂ ವಸತಿ ರಹಿತರ ಸಭೆಯಲ್ಲಿ ಮಾತನಾಡಿದ ಅವರು, 2014ರಿಂದ ಸ್ಲಂ ನಿವಾಸಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ನಿರಂತರ ಹೋರಾಟ ನಡೆಸುತ್ತಿದ್ದರೂ ಸಮಸ್ಯೆಗಳು ಬಗೆಹರಿದಿಲ್ಲ ಎಂದು ಆರೋಪಿಸಿದರು.
ನಗರದ 348 ಕುಟುಂಬಗಳಿಗೆ ಮನೆ ಮಂಜೂರಾತಿ ಪತ್ರಗಳನ್ನು ವಿತರಿಸಲಾಗಿದ್ದರೂ, ಮನೆ ಹಂಚಿಕೆ ವೇಳೆ ನೈಜ ಫಲಾನುಭವಿಗಳನ್ನು ಕಡೆಗಣಿಸಿ ಪ್ರಭಾವಿ ವ್ಯಕ್ತಿಗಳಿಗೆ ಆದ್ಯತೆ ನೀಡಲಾಗಿದೆ ಎಂದು ದೂರಿದರು. ಇದರಿಂದ ಅನೇಕ ಅರ್ಹ ಕುಟುಂಬಗಳು ಸರ್ಕಾರದ ವಸತಿ ಯೋಜನೆಯಿಂದ ವಂಚಿತರಾಗಿದ್ದಾರೆ ಎಂದು ಹೇಳಿದರು.
ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ನಗರಸಭೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡಿಲ್ಲ. ಮೂಲಸೌಕರ್ಯಗಳ ಕೊರತೆ, ಕುಡಿಯುವ ನೀರು, ರಸ್ತೆ, ಚರಂಡಿ ಹಾಗೂ ಶೌಚಾಲಯದಂತಹ ಸೌಲಭ್ಯಗಳು ಸಮರ್ಕವಾಗಿ ಲಭ್ಯವಿಲ್ಲ ಎಂದು ಅವರು ಆರೋಪಿಸಿದರು.
ನಗರಸಭೆ ಬಜೆಟ್‌ನಲ್ಲಿ ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ ಮೀಸಲಿಡುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಮಹಿಳೆಯರಿಗೆ ಶೌಚಾಲಯದ ಕೊರತೆಯಿಂದ ತೀವ್ರ ತೊಂದರೆ ಉಂಟಾಗುತ್ತಿದ್ದು, ಅಧಿಕಾರಿಗಳು ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಹೇಳಿದರು.
ಸ್ಲಂ ನಿವಾಸಿಗಳ ಹಕ್ಕುಗಳ ರಕ್ಷಣೆಗೆ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಶೀಘ್ರದಲ್ಲೇ ನಗರಸಭೆ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಇಮ್ತಿಯಾಜ್ ಆರ್. ಮಾನ್ವಿ ತಿಳಿಸಿದರು.
ಸಭೆಯಲ್ಲಿ ಎಂ.ಬಿ. ನದಾಫ್, ಪರವೀನ್ ಬಾನು ಹವಾಲ್ದಾರ್, ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೌಲಾಸಾಬ್ ಗಚ್ಚಿ, ಮೆಹಬೂಬ್‌ಸಾಬ್ ಬಳ್ಳಾರಿ, ಪುಷ್ಪಾ ಬಿಜಾಪುರ, ಖಾಜಾಸಾಬ್ ಇಸ್ಮಾಯಿಲ್, ವಿಶಾಲಾಕ್ಷಿ ಹರೇಗೌಡ್ರ, ಲಕ್ಷ್ಮೀ ಮಳೇಕರ್, ಮುನ್ನಾ ಅಗಡಿ, ನಜಮುನಿಸಾ ಮುರುಗೋಡ, ವೆಂಕಟೇಶ್ ಬಿಂಕದಕಟ್ಟಿ, ರವಿ ಗೋಸಾವಿ, ಮಕ್ತೂಮಸಾಬ್ ಮುಲ್ಲಾ ಸೇರಿದಂತೆ ವಿವಿಧ ಸ್ಲಂ ಪ್ರದೇಶಗಳ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ 