ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಕಠಿಣ ಕ್ರಮಕ್ಕೆ ಆಗ್ರಹ
Demand for strict action condemning atrocities against Dalits
ಲೋಕದರ್ಶನ ವರದಿ
ವಿಜಯಪುರ 25 : ಮೇಲಿಂದ ಮೇಲೆ ರಾಜ್ಯದಲ್ಲಿ ಎಲ್ಲ ಸಮುದಾಯದ ದಲಿತರ, ಹಿಂದುಳಿದವರ ಹಾಗೂ ಶೋಷಿತರ ಮೇಲಿನ ದೌರ್ಜನ್ಯಗಳು ನಡೆಸುತ್ತಿರುವವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ಮುಖ್ಯಮಂತ್ರಿಗಳಿಗೆ, ಗೃಹ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಜಗದೇವ ಸೂರ್ಯವಂಶಿ ಮಾತನಾಡಿ, ರಾಜ್ಯಾದ್ಯಂತ ಇರುವ ದಲಿತರು, ಹಿಂದುಳಿದವರು ಹಾಗೂ ಶೋಷಿತ ಸಮುದಾಯಗಳ ಮೇಲೆ ಹಲ್ಲೆ, ಕೊಲೆ, ಅತ್ಯಾಚಾರ, ಸಾಮಾಜಿಕ ಬಹಿಷ್ಕಾರ ಸೇರಿದಂತೆ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದರೂ ಸರ್ಕಾರ ಮೌನ ವಹಿಸಿರುವುದು ಖಂಡನೀಯ. ಬಾಗಲಕೋಟೆ ಜಿಲ್ಲೆಯ ಉಗಲವಾಟದಲ್ಲಿ ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ.
ಕೊಪ್ಪಳ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕಳವು ಶಂಕೆಯ ಹಿನ್ನೆಲೆಯಲ್ಲಿ ಬಾಲಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆಗಳು ಅತ್ಯಂತ ಆತಂಕಕಾರಿ ಬೆಳವಣಿಗೆಗಳಾಗಿವೆ. ರಾಯಚೂರು ಜಿಲ್ಲೆಯಲ್ಲಿ ಬಿಎಸ್ಪಿ ಮುಖಂಡ ಭೂಮಾನಂದ ಅವರ ಹತ್ಯೆ ಹಾಗೂ ಅಪ್ರಾಪ್ತ ಬಾಲಕಿ - ಅಶ್ವಿನಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳು ಈ ಸಮಾಜವನ್ನು ಬೆಚ್ಚಿಬೀಳಿಸಿವೆ. ವಿಜಯಪುರ ಜಿಲ್ಲೆಯ ಚಬನೂರು ಹಾಗೂ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಗುಂಡಕನಾಳದಲ್ಲಿಯ ವಾಲ್ಮಿಕಿ ಸಮಾಜದ ಯುವಕರ, ಮಹಿಳೆಯರ ಮತ್ತು ಹಿರಿಯರ ಮೇಲೆ ಭೀಕರ ದಾಳಿ ನಡೆದಿದ್ದು, ಹಲವರು ಈ ಗಾಯಗೊಂಡು ವಿಜಯಪುರ ನಗರದ ಜಿಲ್ಲಾಸ್ಪತ್ರೆಗೆ ದಾಖಲುಗೊಂಡಿದ್ದು ಆತಂಕಕಾರಿ ಬೆಳವಣಿಗೆಯಾಗಿದೆ.
ಧಾರವಾಡದ ಕುಂಬಾರಕೊಪ್ಪದಲ್ಲಿ ಏಳು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ವಿಧಿಸಿರುವುದು ಹಾಗೂ ಯಾದಗಿರಿ ಜಿಲ್ಲೆಯ ಕಿಲ್ಲನ ಕೇರಾದಲ್ಲಿ ಭಜಂತ್ರಿ ಸಮುದಾಯದವರಿಗೆ ಊರು ಬಿಡುವಂತೆ ಬೆದರಿಕೆ ಹಾಕಿರುವುದು ಅತ್ಯಂತ ಗಂಭೀರ ವಿಷಯವಾಗಿದೆ ಎಂದರು. ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜದ ಸ್ವಾಸ್ಥ ಕಾಪಾಡುವ ನಿಟ್ಟಿನಲ್ಲಿ ಪತ್ರಕರ್ತರು ನಿರ್ಭೀತಿಯಿಂದ ತಮ್ಮ ವೃತ್ತಿಪರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಭ್ರಷ್ಟಾಚಾರ, ಅಕ್ರಮ ದಂಧೆ, ಕಾಳಸಂತೆ, ಮಾಫಿಯಾ ಹಾಗೂ ಸಮಾಜ ವಿರೋಧಿ ಚಟುವಟಿಕೆಗಳನ್ನು ಬೆಳಕಿಗೆ ತರುವಲ್ಲಿ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ.
ವಿಜಯಪುರದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ದಂಧೆಯ ಕುರಿತು ವಿಶೇಷ ವರದಿ ಪ್ರಕಟಿಸಿದ ಕಾರಣಕ್ಕಾಗಿ ಪತ್ರಕರ್ತ ಪರಶುರಾಮ ಶಿವಶರಣ ಅವರ ಮನೆಗೆ ತೆರಳಿ ಗೂಂಡಾ ವರ್ತನೆ ತೋರಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ ಅವರ ಕುಟುಂಬಕ್ಕೆ ಜೀವಬೆದರಿಕೆ ಹಾಕಿರುವ ಘಟನೆ ಅತ್ಯಂತ ಗಂಭೀರವಾಗಿದೆ ಎಂದರು. ಪತ್ರಕರ್ತರ ಕರ್ತವ್ಯಕ್ಕೆ ಬೆದರಿಕೆ ಹಾಕುವುದು ಕೇವಲ ಒಬ್ಬ ಪತ್ರಕರ್ತನಿಗೆ ಬೆದರಿಕೆ ಹಾಕಿದಂತಲ್ಲ: ಅದು ಪತ್ರಿಕಾ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಪತ್ರಿಕೋದ್ಯಮಕ್ಕೆ ಬೆದರಿಕೆ ಹಾಕಿದಂತಾಗಿದೆ.
ಆದ್ದರಿಂದ ಮೇಲಿನ ಎಲ್ಲ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸುತ್ತೇವೆ: ಆದ್ದರಿಂದ ನಿರ್ಭೀತ ಪತ್ರಕರ್ತರು, ನಿರ್ಭೀತ ಹೋರಾಟಗಾರರು ಯಾವುದೇ ಭಯವಿಲ್ಲದೆ ತಮ್ಮ ಕರ್ತವ್ಯ ನಿರ್ವಹಿಸುವಂತಹ ವಾತಾವರಣ ನಿರ್ಮಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಶಾಂತಿಗೆ ಅಪಾಯಕಾರಿ ಯಾಗಿರುವುದು ದೃಢಪಟ್ಟಲ್ಲಿ ಗಡಿಪಾರು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯದ ಎಲ್ಲ ಸಮುದಾಯದ ನಾಗರಿಕರ ಪರವಾಗಿ ಕರ್ನಾಟಕ ರಕ್ಷಣಾ ಸ್ವಾಭಿಮಾನಿ ಸೇನಾ ಸಮಿತಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತದೆ.
ಈ ಸಂದರ್ಭದಲ್ಲಿ ಎಮ್.ಆರ್. ಗುರಿಕಾರ, ಮೈಲಾರ್ಪ ಸೌದಾಗರ, ಶಂಕರ ಸಾತಪೋತೆ, ಮಲ್ಲಿಕಾರ್ಜುನ ಬಟಗಿ, ಬಸವರಾಜ ಶಿವಣಗಿ, ಉಮೇಶ ದೊಡಮನಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 