ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಿದವರಿಗೆ ಗಲ್ಲು ಶಿಕ್ಷೆ ಸೇರಿದಂತೆ ಕಠಿಣ ಕ್ರಮಕ್ಕೆ ಒತ್ತಾಯ
Demand for stringent action, including the death penalty, against those who ruined students' futures
ಗದಗ, ಜು. 24: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳು ದೇಶದ ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡಿವೆ ಎಂದು ಸಾಮಾಜಿಕ ಕಾರ್ಯಕರ್ತ ಕೃಷ್ಣ ಎಚ್. ಹಡಪದ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಅವರು, ನೀಟ್ ಅಕ್ರಮವು ಕೇವಲ ಒಂದು ಪರೀಕ್ಷೆಯ ಅವ್ಯವಹಾರವಲ್ಲ; ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ದೊಡ್ಡ ಹೊಡೆತವಾಗಿದೆ ಎಂದು ಹೇಳಿದ್ದಾರೆ. ಹಣದ ಬಲದಿಂದ ಅರ್ಹತೆಯಿಲ್ಲದವರು ಅವಕಾಶ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ನಿಷ್ಠೆಯಿಂದ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಮೇಲ್ಮೈ ತನಿಖೆ ನಡೆಸುವುದರಿಂದ ಪ್ರಯೋಜನವಿಲ್ಲ. ನೀಟ್ ಪರೀಕ್ಷೆಯ ಸಂಪೂರ್ಣ ಆಡಳಿತ ವ್ಯವಸ್ಥೆಯನ್ನು ಪರೀಶೀಲಿಸಿ, ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ದೇಶದ್ರೋಹ ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅಕ್ರಮದಿಂದ ಲಾಭ ಪಡೆದವರ ಆಸ್ತಿಯನ್ನು ಜಪ್ತಿ ಮಾಡಿ, ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.
ಅಲ್ಲದೆ, ನೀಟ್ ಅಕ್ರಮದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ನಷ್ಟಕ್ಕೊಳಗಾದ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳಬಾರದು. ಅನ್ಯಾಯದ ವಿರುದ್ಧ ಕಾನೂನುಬದ್ಧ ಹೋರಾಟ ನಡೆಸಬೇಕು ಎಂದು ಕರೆ ನೀಡಿದ ಅವರು, ವಿದ್ಯಾರ್ಥಿಗಳ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ.
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ 