ದಲಿತರ ಮೇಲಿನ ದೌರ್ಜನ್ಯ ತಡೆಗೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
Demand for stringent legal action to prevent atrocities against Dalits
ಗದಗ, ಆ.11: ದಲಿತರ ಮೇಲೆ ನಡೆಯುತ್ತಿರುವ ಶೋಷಣೆ, ದೌರ್ಜನ್ಯ, ಅನ್ಯಾಯ ಹಾಗೂ ಅಸ್ಪೃಶ್ಯತೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಮಹಾಸಭಾ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಉಡಚಪ್ಪ ಹಳ್ಳಿಕೇರಿ ಆಗ್ರಹಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ದಲಿತ ಸಮುದಾಯದವರ ಮೇಲೆ ಸರಣಿ ಅನ್ಯಾಯ, ದೌರ್ಜನ್ಯ ಮತ್ತು ತಾರತಮ್ಯದ ಘಟನೆಗಳು ಹೆಚ್ಚುತ್ತಿರುವುದು ಆತಂಕಕಾರಿ.
ಸಂವಿಧಾನವು ಎಲ್ಲರಿಗೂ ಸಮಾನತೆ, ಸ್ವಾತಂತ್ರ್ಯ ಹಾಗೂ ಗೌರವಯುತ ಜೀವನದ ಹಕ್ಕು ನೀಡಿದ್ದರೂ ಕೆಲ ಪಟ್ಟಭದ್ರ ಹಿತಾಸಕ್ತಿಗಳು ದಲಿತರ ಮೇಲೆ ದೈಹಿಕ ಹಾಗೂ ಮಾನಸಿಕ ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ ಎಂದರು.
ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳನ್ನು ತಕ್ಷಣ ಬಂಧಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ರಕ್ಷಣೆ, ಕಾನೂನು ನೆರವು ಹಾಗೂ ತಕ್ಷಣದ ಆರ್ಥಿಕ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 