ಬಸನಗೌಡ ಪಾಟೀಲ್ ಯತ್ನಾಳ್ ಬಂಧನಕ್ಕೆ ಆಗ್ರಹ
Demand for the arrest of Basanagouda Patil Yatnal
ಕೊಪ್ಪಳ 19 : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬ ಉದ್ಘಾಟನೆಯ ಬಗ್ಗೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಮಾತನಾಡುವಾಗ ಮೈಸೂರು ದಸರಾದಲ್ಲಿ ಸನಾತನ ಧರ್ಮದವರು ಮಾತ್ರ ಚಾಮುಂಡಿ ದೇವಿಗೆ ಹೂ ಮುಡಿಸಬೇಕು. ಅದರ ಹೊರತು ಒಬ್ಬ ಸಾಮಾನ್ಯ ದಲಿತ ಹೆಣ್ಣು ಮಕ್ಕಳಿಗೆ ಅವಕಾಶ ಇಲ್ಲ ಎಂದು ಹೇಳುವ ಮೂಲಕ ಇಡೀ ರಾಜ್ಯದ ದಲಿತ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ.
ಕೂಡಲೇ ಅವರನ್ನು ಬಂಧಿಸುವಂತೆ ವೆಲ್ಫೇರ್ ಪಾರ್ಟಿ ಫಾ ಇಂಡಿಯಾ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರಾದ ಸಬಿಹಾ ಪಟೇಲ್ ಆಗ್ರಹಿಸಿದ್ದಾರೆ.ಸಾರ್ವಜನಿಕವಾಗಿ ದಲಿತ ಹೆಣ್ಣು ಮಕ್ಕಳ ಬಗ್ಗೆ ಕೀಳುಮಟ್ಟದಲ್ಲಿ ಹೇಳಿಕೆ ನೀಡುವ ಮೂಲಕ ಅವಮಾನ ಮಾಡಿದ್ದಾರೆ. ಇಂತಹ ಕೊಳಕು ಮನಸ್ಥಿತಿಯ ಮತ್ತು ಕೋಮು ಸಂಘರ್ಷದ, ಪ್ರಚೋದನಕಾರಿ ಹೇಳಿಕೆ ನೀಡಿರುವ ಇವರನ್ನು ವಿಡಿಯೋ ಆಧಾರದ ಮೇಲೆ ಎಸ್ಸಿ ದೌರ್ಜನ್ಯ ಕಾಯ್ದೆಯ ಅಡಿಯಲ್ಲಿ ಬಂಧಿಸಿ ಜೈಲಿಗೆ ಕಳುಹಿಸಬೇಕು ಎಂದು ಅವರು ಹೇಳಿದ್ದಾರೆ.ಶಾಸಕ ಬಸನಗೌಡ ಯತ್ನಾಳ್ ಅವರು ದಲಿತ, ಅಲ್ಪಸಂಖ್ಯಾತರ ಮಹಿಳೆಯರಿಗೆ ಅವಮಾನ ಮಾಡುವ ರೀತಿಯಲ್ಲಿ ಹೇಳಿಕೆಗಳನ್ನು ನಿರಂತರವಾಗಿ ಕೊಡುತ್ತಿದ್ದಾರೆ. ಯತ್ನಾಳ ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗಿ ದಲಿತ ಹಾಗೂ ಅಲ್ಪಸಂಖ್ಯಾತ ಸಮಾಜಕ್ಕೆ ತುಂಬಾ ನೋವಾಗಿರುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಮಾಜದಲ್ಲಿ ಇಂಥ ಕೋಮು ಪ್ರಚೋದನೆ ನೀಡಿ ಅಶಾಂತಿಗೆ ಕಾರಣರಾಗುತ್ತಿರುವ ಬಸನಗೌಡ ಯತ್ನಾಳ್ ಇವರಿಗೆ ಶಾಸಕತ್ವ ಸ್ಥಾನದಿಂದ ವಾಜ ಮಾಡಬೇಕು. ಒಬ್ಬ ಶಾಸಕರಾಗಿ ಜನರ ಸಮಸ್ಯೆಗಳ ಬಗ್ಗೆ ಕೆಲಸ ಮಾಡುವ ಬದಲು ಹಿಂದೂ ಮುಸ್ಲಿಮರ ಮಧ್ಯೆ ವಿಷ ಬೀಜ ಬಿತ್ತುವುದನ್ನೇ ಕಸಬು ಮಾಡಿಕೊಂಡಿರುವ ಇಂಥ ವ್ಯಕ್ತಿಗಳ ಮೇಲೆ ಸರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಶ್ರೀಮತಿ ಸಬಿಯಾ ಪಟೇಲ್‌ಅಧ್ಯಕ್ಷೆ, ರಾಜ್ಯ ಮಹಿಳಾ ವಿಭಾಗ, ಬೆಂಗಳೂರು.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 