ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಪದ್ಧತಿ ನಿರ್ಮೂಲನೆಗೆ ಒತ್ತಾಯ
Demand for the eradication of the manual scavenging practice
ಬಳ್ಳಾರಿ, ಆ.27: ಮ್ಯಾನುಯಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿ, ಮಲಹೊರುವ ವೃತ್ತಿಯಲ್ಲಿ ತೊಡಗಿರುವವರ ಪುನರ್ವಸತಿ ್ಣ್ಖ್ಲೂ್ಪುಹಿ2013 ಅನ್ನು ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಂದಕೂರು ರಾಮುಡು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ನಗರದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಸುರಕ್ಷತಾ ವ್ಯವಸ್ಥೆಗಳಿಲ್ಲದೆ ಮ್ಯಾನ್‌ಹೋಲ್, ಸೆಪ್ಟಿಕ್ ಟ್ಯಾಂಕ್ ಹಾಗೂ ಒಳಚರಂಡಿಗಳನ್ನು ಸ್ವಚ್ಛಗೊಳಿಸಲು ಕಾರ್ಮಿಕರನ್ನು ನಿಯೋಜಿಸುವುದು ಅಮಾನವೀಯ ಹಾಗೂ ಕಾನೂನುಬಾಹಿರ ಕೃತ್ಯವಾಗಿದೆ ಎಂದರು.
ಮ್ಯಾನುಯಲ್ ಸ್ಕ್ಯಾವೆಂಜರ್ ಕುಟುಂಬಗಳಿಗೆ ಗೌರವಯುತ ಜೀವನ, ವಸತಿ, ಉದ್ಯೋಗ, ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು. ಮನೆ ಅಥವಾ ನಿವೇಶನವಿಲ್ಲದ ಕುಟುಂಬಗಳಿಗೆ ವಸತಿ, ಅರ್ಹತೆಗೆ ಅನುಗುಣವಾಗಿ ಶಾಶ್ವತ ಉದ್ಯೋಗ, ಸ್ವಯಂ ಉದ್ಯೋಗಕ್ಕಾಗಿ ಕೌಶಲ್ಯ ತರಬೇತಿ, ಉಪಕರಣ, ಬಂಡವಾಳ, ಸಾಲ ಹಾಗೂ ಅಗತ್ಯ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿದರು.
ಅಲ್ಲದೆ, ಆರೋಗ್ಯ ವಿಮೆ ಹಾಗೂ ಆರೋಗ್ಯ ಕಾರ್ಡ್‌ಗಳನ್ನು ಒದಗಿಸಿ, ಅಗತ್ಯ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಕೆಲಸ ಮಾಡಲು ಅಸಮರ್ಥರಿಗೆ ಮಾಸಿಕ ಪಿಂಚಣಿ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಸಫಾಯಿ ಕರ್ಮಚಾರಿಗಳ ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿ, ವಸತಿ ಶಾಲೆ, ಶಾಲೆ, ಕಾಲೇಜು ಹಾಗೂ ಉನ್ನತ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ವಿಶೇಷ ಅವಕಾಶ ಮತ್ತು ವಿದ್ಯಾರ್ಥಿವೇತನ ನೀಡಬೇಕು. ಮಕ್ಕಳು ಶಾಲೆ ತೊರೆದು ಪೋಷಕರ ವೃತ್ತಿಗೆ ಸೇರುವುದನ್ನು ತಡೆಯಲು ವಸತಿ ಪ್ರದೇಶಗಳಲ್ಲಿ ‘ಭೀಮ ಶಾಲೆ’ಗಳನ್ನು ಸ್ಥಾಪಿಸಬೇಕು ಎಂದರು.
ಸೆಪ್ಟಿಕ್ ಟ್ಯಾಂಕ್, ಮ್ಯಾನ್‌ಹೋಲ್ ಹಾಗೂ ಒಳಚರಂಡಿಗಳಿಗೆ ಕಾರ್ಮಿಕರನ್ನು ಸೂಕ್ತ ಸುರಕ್ಷತಾ ಸಾಧನ, ತರಬೇತಿ ಮತ್ತು ವೈಜ್ಞಾನಿಕ ಸುರಕ್ಷತಾ ಮಾನದಂಡಗಳಿಲ್ಲದೆ ಇಳಿಸುವುದನ್ನು ಸಂಪೂರ್ಣವಾಗಿ ತಡೆಯಬೇಕು. ಮಲಸ್ವಚ್ಛತಾ ಕಾರ್ಯವನ್ನು ಆಧುನಿಕ ಯಂತ್ರೋಪಕರಣಗಳ ಮೂಲಕವೇ ನಿರ್ವಹಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯವಿರುವ ಕಡೆ ತಕ್ಷಣ ಆಧುನಿಕ ಸ್ವಚ್ಛತಾ ಯಂತ್ರೋಪಕರಣಗಳನ್ನು ಅಳವಡಿಸುವುದರ ಜೊತೆಗೆ, ಈ ವೃತ್ತಿಯಲ್ಲಿ ಮುಂದುವರಿಯಲು ಆಸಕ್ತಿ ಹೊಂದಿರುವವರಿಗೆ ಉಚಿತವಾಗಿ ಆಧುನಿಕ ಉಪಕರಣಗಳನ್ನು ನೀಡಿ ತರಬೇತಿ ನೀಡಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಶೌಚಾಲಯ, ಸಮುದಾಯ ಭವನ, ಉದ್ಯಾನ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳ ನಿರ್ವಹಣಾ ಕಾರ್ಯಗಳನ್ನು ಸ್ಕ್ಯಾವೆಂಜರ್ ಕುಟುಂಬಗಳಿಗೆ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಚಾಲಕ ಡಾ. ಕೆ.ಬಿ. ಓಬಳೇಶ್, ರಾಜ್ಯ ಸಮಿತಿ ಸದಸ್ಯ ಡಾ. ಆರ್. ಚಂದ್ರಶೇಖರ್, ರಾಜ್ಯ ಸಂಚಾಲಕ ಪದ್ಮ ಹಾಗೂ ಜಿಲ್ಲಾ ಸಂಯೋಜಕ ಕಂದಕೂರು ರಾಮುಡು ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 