ಬತಿಗಿ ಸಮಾಜಕ್ಕೆ ಉದ್ಯೋಗದಲ್ಲಿ 2ಎ ಮೀಸಲಾತಿ ನೀಡಲು ಸರ್ಕಾರಕ್ಕೆ ಆಗ್ರಹ
Demand for the government to grant '2A' reservation in employment to the Bathigi community
ತಾಳಿಕೋಟಿ 04 : ಬತಿಗಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದ ಸಮುದಾಯವಾಗಿದ್ದು, ಈ ಸಮಾಜದ ಯುವಕರಿಗೆ ಸೂಕ್ತ ಅವಕಾಶಗಳು ದೊರೆಯುತ್ತಿಲ್ಲ. ಆದ್ದರಿಂದ ಸರ್ಕಾರವು ಶೀಘ್ರವಾಗಿ ಬತಿಗಿ ಸಮಾಜದ ವಿದ್ಯಾರ್ಥಿಗಳಿಗೆ ಉದ್ಯೋಗ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಬತಿಗಿ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಹಾಗೂ ತಾಲ್ಲೂಕು ಘಟಕ ತಾಳಿಕೋಟೆ ವತಿಯಿಂದ ತಹಶೀಲ್ದಾರ್ ಡಾ. ವಿನಯ್ ಹುಗಾರ ಅವರ ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಲಾಯಿತು.
ಮನವಿ ಪತ್ರದಲ್ಲಿ, ಕರ್ನಾಟಕ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠವು ಬತಿಗಿ ಸಮುದಾಯವನ್ನು ಉದ್ಯೋಗ ಉದ್ದೇಶಕ್ಕಾಗಿ ಪ್ರವರ್ಗ ‘ಡಿ’ ಹಾಗೂ ಶಿಕ್ಷಣ ಉದ್ದೇಶಕ್ಕಾಗಿ ಪ್ರವರ್ಗ ‘ಬಿ’ ಅಡಿಯಲ್ಲಿ ವರ್ಗೀಕರಿಸಿರುವುದು ಮೀಸಲಾತಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಉಲ್ಲೇಖಿಸಲಾಗಿದೆ. ಹೀಗಾಗಿ ಸಂವಿಧಾನದ 16(4) ಅಡಿಯಲ್ಲಿ ಬತಿಗಿ ಸಮುದಾಯವನ್ನು ಪ್ರವರ್ಗ ‘ಡಿ’ ಬದಲಿಗೆ ಪ್ರವರ್ಗ ‘ಬಿ’ ಅಡಿಯಲ್ಲಿ ಮರು ವರ್ಗೀಕರಿಸಬೇಕು ಎಂದು ನ್ಯಾಯಾಲಯದ ಆದೇಶವನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಎಂ.ಎಸ್. ಸರಶೆಟ್ಟಿ, ನಗರ ಘಟಕದ ಅಧ್ಯಕ್ಷ ಎಂ.ಆರ್. ಕತ್ತಿ, ನ್ಯಾಯವಾದಿ ಗಂಗಾಧರ ಕಸ್ತೂರಿ, ರಮೇಶ್ ಸಾಲಂಕಿ, ಚನ್ನಬಸಪ್ಪ ಸರಶೆಟ್ಟಿ, ಶಿವಲಿಂಗಪ್ಪ ಪಾಲ್ಕಿ, ಈರಣ್ಣ ಕಲಬುರ್ಗಿ, ಗುರುಸಂಗಪ್ಪ ಜಂಬಲದಿನ್ನಿ, ಮಹೇಶ್ ದೇವಶೆಟ್ಟಿ, ವಿಶ್ವನಾಥ ಕತ್ತಿ, ಸಂಗಮೇಶ ಪಾಲ್ಕಿ, ಮಲ್ಲಿಕಾರ್ಜುನ ಕಸ್ತೂರಿ, ಶಾಂತಪ್ಪ ಈಜೇರಿ, ಸಿ.ಆರ್. ಕತ್ತಿ, ಮುತ್ತು ಬಳಗಾನೂರ, ಮಲ್ಲಿಕಾರ್ಜುನ ಸರಶೆಟ್ಟಿ, ಕಾಶಿನಾಥ ಪಾಲ್ಕಿ ಸೇರಿದಂತೆ ತುಂಭಗಿ ಗ್ರಾಮದ ಸಮಾಜದ ಬಾಂಧವರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 