ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಸ್ವೀಕರಿಸಲು ಕಾಲಾವಕಾಶದ ಬೇಡಿಕೆ
Demand for time to accept pro-Karnataka resolution in the Municipal Corporation
ಲೋಕದರ್ಶನ ವರದಿ
ಬೆಳಗಾವಿ 22: ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿಯನ್ನು ಸ್ವೀಕರಿಸಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕಳೆದ ಮಾರ್ಚ 26 ರಿಂದ ನಡೆಸಿರುವ ಹೋರಾಟ ತಮ್ಮ ಗಮನಕ್ಕೆ ಬಂದಿದ್ದು ಬಿಜೆಪಿ ಬಹುಮತದ ಪಾಲಿಕೆಯಲ್ಲಿ ಗೊತ್ತುವಳಿ ಸ್ವೀಕರಿಸಲು ಜೂನ್ 10 ರ ವರೆಗೆ ತಮಗೆ ಕಾಲಾವಕಾಶ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್. ವಿಜಯೇಂದ್ರರವರು ಇಂದು ಬೆಂಗಳೂರಿನಲ್ಲಿ ನಮ್ಮ ಕರ್ನಾಟಕ ಸೇನೆಯ ಮುಖಂಡರಿಗೆ ಕೋರಿದ್ದಾರೆ.
ಮಲ್ಲೇಶ್ವರಂದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯ ಮುಂದೆ ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಬಸವರಾಜ ಪಡುಕೋಟೆ ಹಾಗೂ ಉತ್ತರ ಕರ್ನಾಟಕದ ಅಧ್ಯಕ್ಷ ಅಮೃತ ಇಜಾರೆ ಅವರ ನೇತೃತ್ವದಲ್ಲಿ ನಡೆದ ನೂರಾರು ಕಾರ್ಯಕರ್ತರ ಪ್ರತಿಭಟನೆಯ ನಂತರ ಮನವಿ ಸ್ವೀಕರಿಸಿದ ವಿಜಯೇಂದ್ರರವರಿಗೆ ಸೇನೆಯ ಮುಖಂಡರು ಗೊತ್ತುವಳಿ ಸ್ವೀಕರಿಸಲು ಒಂದು ವಾರ ಕಾಲದ ಗಡುವು ನೀಡಿದರು. ಆದರೆ ಜೂನ್ 10 ರ ವರೆಗೆ ತಮಗೆ ಸಮಯಾವಕಾಶ ನೀಡಬೇಕೆಂದು ಕೋರಿದರು.
ಬೆಳಗಾವಿ ಪಾಲಿಕೆಯಲ್ಲಿ “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ”, ಗಡಿ ವಿವಾದ ಪರಿಹಾರಕ್ಕೆ ಮಹಾಜನ ವರದಿಯೇ ಅಂತಿಮ ಎಂಬ ಗೊತ್ತುವಳಿಗಳನ್ನು ಅಂಗೀಕರಿಸುವಲ್ಲಿ ಪಾಲಿಕೆಯು ವಿಫಲವಾದಲ್ಲಿ ಪಾಲಿಕೆಯನ್ನು ಸೂಪರ್ ಸೀಡ್ ಮಾಡಲು ಒತ್ತಾಯಿಸಿ ರಾಜ್ಯಾದ್ಯಾಂತ ಹೋರಾಟವನ್ನು ನಡೆಸಲಾಗುವದೆಂದು ನಮ್ಮ ಕರ್ನಾಟಕ ಸೇನೆಯ ಮುಖಂಡರು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ವಿರೋಧಿ ಪಕ್ಷದ ಧುರೀಣ ಛಲವಾದಿ ನಾರಾಯಣಸ್ವಾಮಿ ಹಾಗೂ ಇತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 