ಪ್ಲಾಸ್ಟಿಕ್ಸನಿಷೇಧಿಸಿದ ಸರ್ಕಾರಿ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಗ್ರಹಿಸಿ

 ಪ್ಲಾಸ್ಟಿಕ್ಸನಿಷೇಧಿಸಿದ ಸರ್ಕಾರಿ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಗ್ರಹಿಸಿ Demand strict implementation of government order banning plastic

ಕೊಪ್ಪಳ  21: ಜಿಲ್ಲೆಯಾದ್ಯಂತ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ ಸರ್ಕಾರದ ಈ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಶನಿವಾರ ಜಿಲ್ಲಾಧಿಕಾರಿ ಡಾ: ಸುರೇಶ್ ಬಿ.ಇಟ್ನಾಳ ಅವರ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಮನವಿಯಲ್ಲಿ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ನಮ್ಮ ಜಿಲ್ಲೆಯ ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಅತ್ಯಂತ ಜ್ವಲಂತ ಸಮಸ್ಯೆಯೊಂದನ್ನು ತಮ್ಮ ಗಮನಕ್ಕೆ ತರಬಯಸುತ್ತೇವೆ.