ಖಾಸಗಿ ಅನುದಾನ ರಹಿತ ಶಾಲೆಗಳ ಬೇಡಿಕೆ ಈಡೇರಿಕೆಗೆ ಆಗ್ರಹ: ಸೆ.9ರಿಂದ ಅನಿರ್ದಿಷ್ಟಾವಧಿ ಧರಣಿ
Demand to Fulfill Requests of Private Unaided Schools: Indefinite Sit-in Protest from September 9
ಕೊಪ್ಪಳ, ಸೆ. 4: ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಕೆಕೆಆರ್ಡಿಬಿ ಅನುದಾನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಸೆ. 9ರಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಸುನೀಲ್ ಕುಮಾರ್ ಆರ್. ಹೂಡಗಿ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಕ್ಕೆ 371(ಜೆ) ವಿಶೇಷ ಸ್ಥಾನಮಾನ ದೊರೆತು 13 ವರ್ಷ ಕಳೆದರೂ ರಾಜಕಾರಣಿಗಳು ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ದೊರೆಯಬೇಕಾದ ಸೌಲಭ್ಯಗಳು ಇನ್ನೂ ಸಮರ್ಕವಾಗಿ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 