ಬಲವಂತದ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಅಳವಡಿಕೆ ಕೈಬಿಡಲು ಜೆಸ್ಕಾಂಗೆ ಆಗ್ರಹ
Demand to Gescom to abandon forced installation of prepaid smart meters
ಕೊಪ್ಪಳ 13: ಜಿಲ್ಲೆಯಾದ್ಯಂತ ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ಜೆಸ್ಕಾಂ ವತಿಯಿಂದ ಏಕಪಕ್ಷೀಯವಾಗಿ ಜಾರಿಗೆ ತರಲಾಗುತ್ತಿರುವ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ಗಳ ಕಡ್ಡಾಯ ಅಳವಡಿಕೆಯನ್ನು ತಕ್ಷಣವೇ ಕೈಬಿಡಬೇಕು ಮತ್ತು ಹಾಲಿ ಇರುವ ಪೋಸ್ಟ್ ಪೇಯ್ಡ್ ವ್ಯವಸ್ಥೆಯನ್ನೇ ಮುಂದುವರೆಸಬೇಕು ಎಂದು ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳಿಂದ ಶುಕ್ರವಾರ ಕೊಪ್ಪಳ ನಗರಕ್ಕೆ ಭೇಟಿ ನೀಡಿದ್ದ ಕಲಬುರ್ಗಿಯ ಜೆಸ್ಕಾಂ ಕಚೇರಿಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಅವರಿಗೆ ಮನವಿ ಅರ್ಿಸಲಾಯಿತು.
ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ ಐಎಎಸ್ ಅವರಿಗೆ ಖುದ್ದಾಗಿ ಭೇಟಿ ಮಾಡಿ,12 ಮಾರ್ಚ್ 2026 ಸುತ್ತೋಲೆ ಪ್ರಕಾರ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸುವಿಕೆಯಿಂದ ಸಾರ್ವಜನಿಕರಿಗಾಗುವ ತೊಂದರೆಗಳು ಹಾಗೂ ಪ್ರಾಯೋಗಿಕ ಸಮಸ್ಯೆಗಳನ್ನು ಸುದೀರ್ಘವಾಗಿ ಮನವರಿಕೆ ಮಾಡಿಕೊಟ್ಟರು. ಪ್ರಮುಖ ಕಾನೂನಾತ್ಮಕ ಅಂಶಗಳ ಉಲ್ಲೇಖ: ಮನವಿ ಸಲ್ಲಿಸಿದ ಬಳಿಕ ಮಾತನಾಡಿ ಬಲವಂತದ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಅಳವಡಿಕೆಯು ಗ್ರಾಹಕರ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 