ಶ್ರೀ ಧರ್ಮಸ್ಥಳ ಕ್ಷೇತ್ರ ಬಗ್ಗೆ ಅವಹೇಳನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಲು ಆಗ್ರಹ
Demand to arrest the miscreants who insulted the Sri Dharmasthala Kshetra
ಕಾಗವಾಡ 31: ಶ್ರೀ ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರ ಕುಟುಂಬದ ಬಗ್ಗೆ ಅವಹೇಳನ ಮಾಡಿದ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ, ಜೈಲಿಗೆ ಅಟ್ಟುವಂತೆ ಆಗ್ರಹಿಸಿ, ಅಥಣಿ ಹಾಗೂ ಕಾಗವಾಡ ತಾಲೂಕಿನ ಸಾವಿರಾರು ಜೈನ ಸಮುದಾಯದ ಶ್ರಾವಕರು ಧರ್ಮಸ್ಥಳದ ಕಡೆಗೆ ಹೊರಟಿದ್ದಾರೆ.
ಈ ವೇಳೆ ಕರ್ನಾಟಕ ಜೈನ ಅಸೋಶಿಯೇಶನ ರಾಜ್ಯ ಉಪಾಧ್ಯಕ್ಷ ಶೀತಲಗೌಡ ಪಾಟೀಲ ಮಾತನಾಡಿ, ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಅದರ ಕೀರ್ತಿ ದೇಶಾದ್ಯಂತ ಹರಡಿದ್ದು, ಹೇಗಾದರೂ ಮಾಡಿ, ಶ್ರೀ ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರ ಕುಟುಂಬದ ಬಗ್ಗೆ ಹೆಸರು ಕೆಡಿಸಬೇಕೆಂದು ಕೆಲ ಎಡಪಂಕ್ತಿಯರ ಹುನ್ನಾರವಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಧರ್ಮಸ್ಥಳದಲ್ಲಿ ಮೃತ ದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಹಿಂದೆ ಷಡ್ಯಂತ್ರ ನಡೆದಿದ್ದು, ಇದರ ಸಮಗ್ರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಭಾಗದಿಂದ ಸಾವಿರಾರು ಭಕ್ತರು ಕಾಲ್ನಡಿಗೆ ಮೂಲಕ ವಾಹನಗಳ ಮೂಲಕ ತಮ್ಮ ಪ್ರಯಾಣ ಬೆಳೆಸಿದ್ದಾರೆ. ಜೈನ ಧರ್ಮದ ಮಠಮಾನ್ಯಗಳಿಗೆ ಚ್ಯೂತಿಯನ್ನುಂಟು ಮಾಡಲು ಹೊಟ್ಟೆಕಿಚ್ಚಿನಿಂದ ಅಧರ್ಮಿಗಳು ಕುತಂತ್ರ ನಡೆಸುತ್ತಿದ್ದಾರೆ. ಈ ಅನ್ಯಾಯವನ್ನು ಸರ್ಕಾರ ಹಿಮ್ಮೆಟ್ಟಿಸದೇ ಹೋದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಈ ಹೋರಾಟದಲ್ಲಿ ಶೀತಲಗೌಡ ಪಾಟೀಲ, ಮಾಳ ಹಷೇಂರ್ದ್ರ, ಆಶಾ ಪ್ರಭು, ಶೀತಲಕುಮಾರ ಬಿ.ಆರ್., ಪ್ರದೀಪ ಚಿಂಚವಾಡೆ, ವಜ್ರಕುಮಾರ ಮಗದುಮ್ಮ, ಆದೇಶ ವಸವಾಡೆ, ಅಮೀನ ಶೇಖ, ಅಪ್ಪಾಸಾಬ ಸನದಿ, ಮಹಾವೀರ ವಸವಾಡೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 