ರಸ್ತೆ ಗುಂಡಿಗಳನ್ನು ಮುಚ್ಚಲು ಆಗ್ರಹ
Demand to close road potholes
ಲೋಕದರ್ಶನ ವರದಿ
ದಾಂಡೇಲಿ 08: ಹಳೆದಾಂಡೇಲಿ ವಿವಿಧ ಬಡಾವಣೆಗಳನ್ನು ಸಂಪರ್ಕಿಸುವ ರಸ್ತೆಯಲ್ಲಿ ಹಲವೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದೆ. ಇದರಿಂದ ದ್ವಿ ಚಕ್ರವಾಹನ ಸವಾರರು ಅಪಘಾತದ ಭೀತಿಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ವ್ಯಾಪರಸ್ಥರು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ.
ಮಳೆಯ ನೀರು ರಸ್ತೆ ಗುಂಡಿಗಳಲ್ಲಿ ನಿಂತುಕೊಳ್ಳುವುದರಿಂದ ವಾಹನ ಸವಾರರರಿಗೆ ಗುಂಡಿಗಳ ಆಳದ ಅರಿವು ಸಿಗದೆ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿದೆ. ರಾತ್ರಿ ವೇಳೆಯಲ್ಲಿ ರಸ್ತೆ ಬೆಳಕಿನ ಕೊರತೆಯೂ ಸಮಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಸ್ಥಳೀಯ ನಿವಾಸಿಗಳು ಹಲವು ಬಾರಿ ಸಂಬಂಧಿತ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳ ಗಮನಕ್ಕೆ ಸಮಸ್ಯೆಯನ್ನು ತಂದಿದ್ದರೂ ರಸ್ತೆ ದುರಸ್ತಿ ಕಾರ್ಯ ಮಾತ್ರ ಆರಂಭವಾಗಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ತಕ್ಷಣ ರಸ್ತೆ ದುರಸ್ತಿ ಕೈಗೊಂಡು ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 