ರಮೇಶ್ ಸುವೇ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಆಗ್ರಹ
Demand to confer Rajyotsava Award on Ramesh Suve
ಕೊಪ್ಪಳ, 17: ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ಕೊಪ್ಪಳದ ಹೆಸರನ್ನು ಬೆಂಗಳೂರಿನಲ್ಲಿ ಗುರುತಿಸುವಂತೆ ಮಾಡಿದ ಹಿರಿಯ ಪತ್ರಕರ್ತ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಸಾಧಕ ರಮೇಶ್ ಸುವೇ ಅವರಿಗೆ ಜಾತಿ, ಮತ, ಪಂಗಡ ಮೀರಿಸಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂದು ವಿವಿಧ ಗಣ್ಯರು ಆಗ್ರಹಿಸಿದರು.
ನಗರದ ಸರ್ಕಾರಿ ನೌಕರರ ಭವನದಲ್ಲಿ ವಿಶ್ವಬಂಧು ಬಸವಣ್ಣ ಶಿಕ್ಷಣ ಮತ್ತು ಸಾಂಸ್ಕೃತಿಕ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ನಡೆದ ರಮೇಶ್ ಸುವೇ9 ಅವರ ಬಹುಮುಖ ವ್ಯಕ್ತಿತ್ವ ಹಾಗೂ ಸಾಧನೆ ಕುರಿತ ವಿಚಾರ ಸಂಕಿರಣದಲ್ಲಿ ಈ ಅಭಿಪ್ರಾಯ ವ್ಯಕ್ತವಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ದಾಳಿಂಬೆ ಬೆಳೆಗಾರರ ಸಂಘದ ಅಧ್ಯಕ್ಷ ದೇವೇಂದ್ರ್ಪ ಬಳೂಟಗಿ ಮಾತನಾಡಿ, ಬಸವಣ್ಣನ ಕೀರ್ತಿಯನ್ನು ಇನ್ನಷ್ಟು ಪಸರಿಸುವ ಕಾರ್ಯಕ್ಕೆ ಟ್ರಸ್ಟ್ ಮುಂದಾಗಿರುವುದು ಸಂತಸದ ಸಂಗತಿ. ಸಮಾಜಕ್ಕೆ ಸುದೀರ್ಘ ಸೇವೆ ಸಲ್ಲಿಸಿದ ರಮೇಶ್ ಸುವೇ9 ಅವರ ಸಾಧನೆಯನ್ನು ಸರ್ಕಾರ ಪರಿಗಣಿಸಬೇಕು ಎಂದರು.
ಮಾಜಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್ ಮೈನ್‌ಹಳ್ಳಿ, ರಮೇಶ್ ಸುವೇ9 ಅವರು ಈ ವಯಸ್ಸಿನಲ್ಲೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೊಪ್ಪಳದ ಸಾಧಕರೊಬ್ಬರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ಅನ್ಯಾಯವಾಗಬಾರದು ಎಂದು ಹೇಳಿದರು.
ಶ್ರೀ ಮ.ನಿ.ಪ್ರ. ಶಿವಶಾಂತವೀರ ಮಹಾಸ್ವಾಮಿಗಳು ಮಾತನಾಡಿ, ರಮೇಶ್ ಸುವೇ9 ಅವರ ಸಾಧನೆಗೆ ಎಲ್ಲರೂ ಬೆಂಬಲ ನೀಡಬೇಕು. ಅವರ ಸರಳ ಹಾಗೂ ಸಜ್ಜನಿಕೆಯ ಬದುಕಿಗೆ ದೇವರ ಆಶೀರ್ವಾದ ಇರಲಿ ಎಂದರು.
ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ. ಜೀವನಸಾಬ್ ವಾಲಿಕಾರ್, ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜುಮದಾರ್, ಸಾಹಿತಿ ಡಾ. ರಾಜೇಂದ್ರ ಗಡಾದ, ಪ್ರಾಧ್ಯಾಪಕ ಶರಣಬಪ್ಪ ಬಿಳಿಯಲಿ, ನಾಟಕ ಅಕಾಡೆಮಿ ಸದಸ್ಯ ಕಿಲ್ಲೇದಾರ ಸೇರಿದಂತೆ ಹಲವರು ರಮೇಶ್ ಸುವೇ ಅವರ ಪತ್ರಿಕೋದ್ಯಮ, ನಾಟಕ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಸೇವೆಯನ್ನು ಶ್ಲಾಘಿಸಿದರು.
ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ವಿಠ್ಠಲರಾವ್ ಗಾಯಕ್ವಾಡ್ ಅವರು ಅಭಿನಂದನಾ ಭಾಷಣ ಮಾಡಿದರು. ಸಾಹಿತಿ ಡಾ. ಮಹಾಂತೇಶ ಮಲ್ಲನಗೌಡರ ಅಧ್ಯಕ್ಷತೆ ವಹಿಸಿದ್ದರು.
ಪತ್ರಕರ್ತ ಮಂಜುನಾಥ ಜಿ. ಗೊಂಡಬಾಳ ಪರಿಚಯ ಭಾಷಣ ಮಾಡಿದರು. ಕಾರ್ಯದರ್ಶಿ ಶಿವಬಸಪ್ಪ ಮಸ್ಕಿ ಸ್ವಾಗತಿಸಿದರು. ಅಧ್ಯಕ್ಷ ಡಾ. ಮಹಾಂತೇಶ ನೆಲಗಾಣಿ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಶರಣಪ್ಪ ಹಾಟಿ, ಗೀತಾ ಗೊಗೇರಿ, ಸಂಗೀತಾ ಮಸ್ಕಿ, ನವ್ಯ ನೆಲಗಾಣಿ, ಬಸವಂತಪ್ಪ ಮತ್ತೂರು, ಮಾಲತೇಶ ಶಾಂತಗಿರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 