ಶಾಲಾ-ಕಾಲೇಜುಗಳ ಬಳಿ ಗುಟ್ಕಾ, ಸಿಗರೇಟ್ ಮಾರಾಟಕ್ಕೆ ಕಡಿವಾಣ ಹಾಕಲು ಆಗ್ರಹ
Demand to curb sale of gutka, cigarettes near schools and colleges
ಕೊಲಾರ 30: ಶಾಲೆ-ಕಾಲೇಜುಗಳ ಸುತ್ತಮುತ್ತ ಗುಟ್ಕಾ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಇತರ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಪಟ್ಟಣದ ವಾರ್ಡ್ ಸಂಖ್ಯೆ 4ರ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಪಾಲಿಟೆಕ್ನಿಕ್ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿಯೇ ಗುಟ್ಕಾ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಸಾರ್ವಜನಿಕರು ತಹಶೀಲ್ದಾರ್, ಪೊಲೀಸ್ ಠಾಣೆ ಹಾಗೂ ಪಟ್ಟಣ ಪಂಚಾಯಿತಿಗೆ ಮನವಿ ಸಲ್ಲಿಸಿದರು.
ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ವಿರೂಪಾಕ್ಷಿ ಕೋಲಕಾರ ಹಾಗೂ ಸದಸ್ಯ ಬಾಬು ಭಜಂತ್ರಿ ಮಾತನಾಡಿ, ಶಿಕ್ಷಣ ಸಂಸ್ಥೆಗಳ ಸಮೀಪ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದ್ದರೂ ನಿಯಮ ಉಲ್ಲಂಘನೆ ಮುಂದುವರಿದಿದೆ. ಅಂಗಡಿಗಳ ಮುಂದೆ ಯುವಕರು ಧೂಮಪಾನ ಮಾಡುವುದು ಹಾಗೂ ಇತರ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವುದು ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಶಾಲಾ-ಕಾಲೇಜುಗಳ ಮುಂಭಾಗದ ಮುಖ್ಯರಸ್ತೆಯಲ್ಲಿ ಬೈಕ್ಗಳಲ್ಲಿ ನಿಯಮ ಉಲ್ಲಂಘಿಸಿ ಸಂಚರಿಸುವ ಯುವಕರು ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ತೊಂದರೆ ಉಂಟುಮಾಡುತ್ತಿರುವುದರಿಂದ ಪೊಲೀಸ್ ಇಲಾಖೆ ನಿರಂತರ ಗಸ್ತು ಹೆಚ್ಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ರಾಮಣ್ಣ ಉಪ್ಪಲದಿನ್ನಿ, ರಾಜು ತುಂಬರಮಟ್ಟಿ, ವೀರಭದ್ರ್ಪ ಬಾಗಿ, ರಮೇಶ್ ಕಾಕಂಡಕಿ, ರಾಕೇಶ್ ಕೆಳಗಿನಮನೆ, ಸುನೀಲ್ ನಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿಕ್ಷಣ ಸಂಸ್ಥೆಗಳ ಸಮೀಪ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ, ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ತಾಲ್ಲೂಕು ಅಧ್ಯಕ್ಷ ರವಿ ಗೊಲ್ಲಸಂಗಿ ಆಗ್ರಹಿಸಿದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 