13 ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಲು ಆಗ್ರಹ: ರೈತರ ಅನಿರ್ದಿಷ್ಟ ಹೋರಾಟ 2ನೇ ದಿನಕ್ಕೆ

13 ತಾಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸಲು ಆಗ್ರಹ: ರೈತರ ಅನಿರ್ದಿಷ್ಟ ಹೋರಾಟ 2ನೇ ದಿನಕ್ಕೆ  Demand to declare 13 taluks drought-hit: Farmers' indefinite protest enters second day


ವಿಜಯಪುರ  03: ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಎಲ್ಲಾ 13 ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಡೆಸುತ್ತಿರುವ ಅನಿರ್ದಿಷ್ಟ ಹೋರಾಟ ಗುರುವಾರ 2ನೇ ದಿನಕ್ಕೆ ಕಾಲಿಟ್ಟಿತು. ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಮುಖಂಡ ಅಣ್ಣರಾಯ ಈಳಗೇರ್ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ನಿರಂತರವಾಗಿ ಒಣ ಹಾಗೂ ಹಸಿ ಬರ ಎದುರಾಗುತ್ತಿದ್ದು, ಜಿಲ್ಲೆಯ ಪರಿಸ್ಥಿತಿಯನ್ನು ಸಮಗ್ರವಾಗಿ ಪರೀಶೀಲಿಸಿ ಸಂಪೂರ್ಣ ಬರಗಾಲ ಜಿಲ್ಲೆ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು ಎಂದರು.  ರೈತ ಮುಖಂಡರು ಪ್ರತಿ ಎಕರೆಗೆ 50 ಸಾವಿರ ಬರ ಪರಿಹಾರ ನೀಡಬೇಕು, ಬೆಳೆ ವಿಮೆ ಪಾವತಿಸಿರುವ ರೈತರಿಗೆ ಶೇ.50ರಷ್ಟು ಮಧ್ಯಂತರ ವಿಮಾ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು, ಹಳ್ಳ-ಕೊಳ್ಳ, ಕೆರೆ ಹಾಗೂ ಕಾಲುವೆಗಳನ್ನು ಭರ್ತಿ ಮಾಡಬೇಕು, ಜಾನುವಾರುಗಳಿಗೆ ಅಗತ್ಯ ಮೇವು ಒದಗಿಸಬೇಕು ಹಾಗೂ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು. ಹೋರಾಟದಲ್ಲಿ ಜಿಲ್ಲಾಧ್ಯಕ್ಷ ಸಂಗಮೇಶ ಸಗರ, ಸುರೇಖಾ ರಜಪೂತ, ಶ್ರೀಶೈಲ ಮುಳಜಿ, ಬಸವರಾಜ ಹಂದ್ರಾಳ, ನರೇಂದ್ರಬಾಬು ಬರಡ್ಡಿ, ರವಿ ಬರಡ್ಡಿ ಸೇರಿದಂತೆ ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ ಹಾಗೂ ನೂರಾರು ರೈತರು ಭಾಗವಹಿಸಿದ್ದರು.